ಆ್ಯಪ್ನಗರ

ರಾಜ್ಯ ಸರ್ಕಾರದಿಂದ 5 ಲಕ್ಷ ರೈತರಿಗೆ 3807 ಕೋಟಿ ಸಾಲ; ಎಸ್ ಟಿ ಸೋಮಶೇಖರ್

ರಾಜ್ಯದಲ್ಲಿ 5 ಲಕ್ಷ ಲಕ್ಷ ರೈತರಿಗೆ 3,807 ಕೋಟಿ ಸಾಲವನ್ನು ನೀಡಲಾಗಿದೆ ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 26 Jun 2020, 3:26 pm
ಕಲಬುರಗಿ: ರಾಜ್ಯದಲ್ಲಿ ಗುರುವಾರದ ವರೆಗೆ 5,42,991 ರೈತರಿಗೆ 3807 ಕೋಟಿ ರೂಪಾಯಿ ಹಣವನ್ನು ರೈತರಿಗೆ ಕೃಷಿ ಸಾಲವಾಗಿ ವಿತರಣೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದರು.
Vijaya Karnataka Web st somashekar


ಸಹಕಾರ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮಕ್ಕೆ ಚೆಕ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಸಚಿವರು ಮಾತನಾಡಿದರು.

ರೈತರಿಗೆ ಸಾಲ ಕೊಡುವ ಸಂಬಂಧ ಪ್ರಸಕ್ತ ಸಾಲಿನಲ್ಲಿ 1750 ಕೋಟಿ ರೂ. ಸಾಲವನ್ನು ಅಪೆಕ್ಸ್ ಬ್ಯಾಂಕಿಗೆ ನಬಾರ್ಡ್ ಕೊಟ್ಟಿದೆ. ಕಳೆದ ಬಾರಿ ರೈತರಿಗೆ 13,577 ಕೋಟಿ ರೂಪಾಯಿಯನ್ನು ಕೊಡಲಾಗಿತ್ತು. ಈ ಬಾರಿ 14,500 ಕೋಟಿ ರೂಪಾಯಿ ಬೆಳೆ ಸಾಲ ನೀಡಲು ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಶೀಘ್ರದಲ್ಲೇ ಕಲಬುರಗಿಯ ಡಿಸಿಸಿ ಬ್ಯಾಂಕ್‌ ಸೂಪರ್‌ಸೀಡ್‌: ಸಚಿವ ಸೋಮಶೇಖರ್

ರೈತರಿಗೆ ಹೆಚ್ಚಿನ ಸಾಲ ಸಿಗಬೇಕು. ಅವರಿಗೆ ಆರ್ಥಿಕವಾಗಿ ಯಾವುದೇ ಸಮಸ್ಯೆಯಾಗಬಾರದು ಎಂಬುದು ಮಾನ್ಯ ಮುಖ್ಯಮಂತ್ರಿಗಳ ಆಶಯವಾಗಿದ್ದು, ಅವರ ನಿರ್ದೇಶನದಂತೆ ಹೊಸ ರೈತರಿಗೆ ಸಾಲ ನೀಡಲು ಎಲ್ಲ ಜಿಲ್ಲಾ ಸಹಕಾರ ಬ್ಯಾಂಕ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರಾದ ಎಸ್ ಟಿ ಎಸ್ ತಿಳಿಸಿದರು.

ಕಲಬುರಗಿ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್

ಕಲಬುರಗಿ ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡಲಾಗಿದ್ದು, ನಬಾರ್ಡ್ ಅನುಮತಿಗಾಗಿ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ