ಆ್ಯಪ್ನಗರ

ಅಪಘಾತದಲ್ಲಿ ವ್ಯಕ್ತಿ ಸಾವು: ಮೃತರನ್ನೂ ಬಿಡದ ಕಳ್ಳರು

ವಾಕಿಂಗ್ ಮಾಡುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆರೋಪಿ ಚಾಲಕನನ್ನು ಬಂಧಿಸಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ.

Vijaya Karnataka Web 24 Dec 2018, 11:21 am
ಕಲಬುರಗಿ: ವಾಕಿಂಗ್ ಮಾಡುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಗರದ ರಾಮಮಂದಿರ ಬಳಿ ನಡೆದಿದೆ.
Vijaya Karnataka Web acc


ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನಿಗೆ ಫಿಟ್ಸ್ ಬಂದ ಕಾರಣ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿ ವಾಕಿಂಗ್ ಮಾಡುತ್ತಿದ್ದವರ ಮೇಲೆ ಕಾರು ಹರಿದಿದೆ.

ಘಟನೆ ಸಂಬಂಧ KA 56 M 0849 ಸಂಖ್ಯೆಯ ಕಾರು ಜಪ್ತಿ ಮಾಡಿರುವ ಪೊಲೀಸರು, ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಈ ಕುರಿತು ಕಲಬುರಗಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನೂ ಬಿಡದ ಕಳ್ಳರು

ಅಪಘಾತದಲ್ಲಿ ಮೃತಪಟ್ಟವರು ತನ್ನ ತಂದೆ ಎಂದು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬ ಮೃತರ ಬಳಿಯಿದ್ದ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ