ಆ್ಯಪ್ನಗರ

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಗಾಗಿ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯು ಇದೇ ಮೇ 25 ಮತ್ತು 26ರಂದು ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಜೂ.1 ಮತ್ತು 2 ರಂದು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Vijaya Karnataka 23 May 2019, 5:00 am
ಕಲಬುರಗಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಗಾಗಿ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯು ಇದೇ ಮೇ 25 ಮತ್ತು 26ರಂದು ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಜೂ.1 ಮತ್ತು 2 ರಂದು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
Vijaya Karnataka Web prohibition within the range of test centers
ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ


ಈ ಪರೀಕ್ಷೆಯಲ್ಲಿ ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್‌ ಪ್ರದೇಶÜದಲ್ಲಿ 144ರ ಅನ್ವಯ ನಿಷೇಧಿತ ಪ್ರವೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಆದೇಶ ಹೊರಡಿಸಿದ್ದಾರೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಸಂಬಂಧಪಟ್ಟ ಪರೀಕ್ಷಾರ್ಥಿಗಳು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಯ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಯ ಎಲ್ಲ ಜೆರಾಕ್ಸ್‌ ಅಂಗಡಿ ಹಾಗೂ ಪುಸ್ತಕ ಅಂಗಡಿಗಳನ್ನು ಮುಚ್ಚಬೇಕು. ಈ ಪರೀಕ್ಷಾ ಸಂದರ್ಭದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ಮೊಬೈಲ್‌ ಫೋನ್‌, ಬ್ಲೂಟೂತ್‌, ವೈರ್‌ಲೇಸ್‌ ಸೆಟ್‌ಗಳು ಸೇರಿದಂತೆ ಮತ್ತಿತರ ಯಾವುದೇ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಉಪಯೋಗಿಸುವುದನ್ನು ಕರ್ನಾಟಕ ಪೊಲೀಸ್‌ ಕಾಯ್ದೆ ನಿಯಮ, 1963ರ ಕಲಂ-35(ಸಿ) ಅಡಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ