ಆ್ಯಪ್ನಗರ

ಆಂದೋಲಾ ಶ್ರೀ ಬಂಧನ ಖಂಡಿಸಿ ಪ್ರತಿಭಟನೆ

ಆಂದೋಲಾ ಶ್ರೀ ಬಂಧನ ಖಂಡಿಸಿ ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳಿಂದ ಕಲಬುರಗಿಯಲ್ಲಿ ಪ್ರತಿಭಟನೆ ನಡೆಯಿತು.

Vijaya Karnataka Web 2 Nov 2017, 3:29 pm
ಕಲಬುರಗಿ: ಆಂದೋಲಾ ಶ್ರೀ ಬಂಧನ ಖಂಡಿಸಿ ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳಿಂದ ಕಲಬುರಗಿಯಲ್ಲಿ ಪ್ರತಿಭಟನೆ ನಡೆಯಿತು.
Vijaya Karnataka Web protest against andola sri arrest
ಆಂದೋಲಾ ಶ್ರೀ ಬಂಧನ ಖಂಡಿಸಿ ಪ್ರತಿಭಟನೆ


ಆಂದೋಲಾದ ಕರುಣೇಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮೀಜಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಹಿಂದುಪರ ಸಂಘಟನೆಗಳು ಮತ್ತು ಮಠಾಧೀಶರು ಪ್ರತಿಭಟಿಸಿದರು.


ವಿಶ್ವ ಹಿಂದೂ ಪರಿಷತ್, ಬಜರಂಗದಳ ನಡೆಸಿದ ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಸ್ವಾಮೀಜಿಗಳು,ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಮಾಜಿ ಶಾಸಕರು, ಚುನಾಯಿತ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪ್ರಮೋದ್ ಮುತಾಲಿಕ್ ಬಂಧನ

ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದಾಗ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದರು. ಇಲ್ಲಿನ ಕನ್ನಡ ಭವನದಲ್ಲಿ ಮಠಾಧೀಶರೊಂದಿಗೆ ಮಾತನಾಡುತ್ತಿದ್ದಾಗ ಡಿಢೀರ್‌ನೆ ಬಂದ ಪೊಲೀಸರು, ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಬೇಕಿದೆ ಎಂದು ಹೇಳಿ ಕರೆದುಕೊಂಡು ಹೋದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಮಠಾಧೀಶರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ