ಆ್ಯಪ್ನಗರ

ವಿಭಾಗ ಮಟ್ಟದ ರೈತರ ಸಮಾವೇಶ 12 ಕ್ಕೆ

ತೊಗರಿ ಬೆಳೆಗೆ ಕೇಂದ್ರ ಸರಕಾರ ನಿಗದಿಪಡಿಸಿದ ರೂ.5675ಕ್ಕೆ ಹೆಚ್ಚುವರಿಯಾಗಿ ರೂ.1 ಸಾವಿರ ಸೇರಿಸಿ ನೀಡಬೇಕು. ಜೊತೆಗೆ ರಾಜ್ಯ ಸರಕಾರವು ರೂ.1 ಸಾವಿರ ಪ್ರೋತ್ಸಾಹಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಲು ಡಿ.12ರಂದು ಮಧ್ಯಾಹ್ನ 12ಕ್ಕೆ ನಗರದ ಜಗತ್‌ ವೃತ್ತದಲ್ಲಿ ವಿಭಾಗ ಮಟ್ಟದ ರೈತರ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದರು.

Vijaya Karnataka 8 Dec 2018, 5:00 am
ಕಲಬುರಗಿ :ತೊಗರಿ ಬೆಳೆಗೆ ಕೇಂದ್ರ ಸರಕಾರ ನಿಗದಿಪಡಿಸಿದ ರೂ.5675ಕ್ಕೆ ಹೆಚ್ಚುವರಿಯಾಗಿ ರೂ.1 ಸಾವಿರ ಸೇರಿಸಿ ನೀಡಬೇಕು. ಜೊತೆಗೆ ರಾಜ್ಯ ಸರಕಾರವು ರೂ.1 ಸಾವಿರ ಪ್ರೋತ್ಸಾಹಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಲು ಡಿ.12ರಂದು ಮಧ್ಯಾಹ್ನ 12ಕ್ಕೆ ನಗರದ ಜಗತ್‌ ವೃತ್ತದಲ್ಲಿ ವಿಭಾಗ ಮಟ್ಟದ ರೈತರ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದರು.
Vijaya Karnataka Web section level farmers convention is d 12
ವಿಭಾಗ ಮಟ್ಟದ ರೈತರ ಸಮಾವೇಶ 12 ಕ್ಕೆ


ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಕಿಸಾನ್‌ ಸಭಾ ರಾಷ್ಟ್ರೀಯ ಅಧ್ಯಕ್ಷ ಅಶೋಕ ಧಾವಲೆ, ಕೆಪಿಆರ್‌ಎಸ್‌ ರಾಜ್ಯ ಉಪಾಧ್ಯಕ್ಷ ಜಿ.ವಿ.ಶ್ರೀರಾಮರೆಡ್ಡಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಜಿಲ್ಲೆಯಲ್ಲಿ 13 ಲಕ್ಷ ಎಕರೆ ಪ್ರದೇಶದಲ್ಲಿ ಈ ಬಾರಿ ತೊಗರಿ ಬಿತ್ತನೆ ಮಾಡಲಾಗಿದೆ. ಆದರೆ, ಇದರಲ್ಲಿ ಶೇ.40ರಷ್ಟು ಮಾತ್ರ ಇಳುವರಿ ಬಂದಿದೆ. ಚಿಂಚೋಳಿ, ಚಿತ್ತಾಪುರ, ಆಳಂದ ಮತ್ತು ಸೇಡಂ ತಾಲೂಕಿನಲ್ಲಿ ತೊಗರಿ ಹೆಚ್ಚಾಗಿ ಬೆಳೆಯಲಾಗಿದೆ. ಆದರೆ, ಉಳಿದ ತಾಲೂಕಿನಲ್ಲಿ ಬೆಳೆ ಪ್ರಮಾಣ ಕುಸಿತ ಕಂಡಿದ್ದು, ಬೆಳೆಗೆ ತಕ್ಕಂತೆ ಮಾರುಕಟ್ಟೆಯಲ್ಲಿ ದರ ಇಲ್ಲದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಕುರಿತು ಸಹಕಾರ ಸಚಿವ ಬಂಡೆಪ್ಪ ಕಾಶಂಪುರೆ ಅವರಿಗೆ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವಂತೆ ಮನವಿ ಮಾಡಲಾಗಿದೆ. ಅವರು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ ಎಂದರು.

ರೈತರ ಸಮಸ್ಯೆಗಳು ಬಗೆಹರಿಸುವುದರ ಜೊತೆಗೆ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಬೇಕು, ಪ್ರತಿ ಹೆಕ್ಟೇರ್‌ಗೆ ರೂ.10 ಸಾವಿರ ಬರ ಪರಿಹಾರ ನೀಡಬೇಕು, ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಿ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಶರಣಬಸಪ್ಪ ಮಮಶೆಟ್ಟಿ, ಅಶೋಕ ಮ್ಯಾಗೇರಿ, ಅಲ್ತಾಫ್‌ ಇನಾಂದಾರ್‌, ಶಾಂತಪ್ಪ ಪಾಟೀಲ್‌ ಸೇರಿದಂತೆ ಇತರರಿದ್ದರು.

ಪ್ರಧಾನಮಂತ್ರಿಗಳ ನಿವೃತ್ತ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯಂ ಅವರ ಸಲಹೆ ಪರಿಗಣಿಸಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ತೊಗರಿಗೆ ರೂ.1 ಸಾವಿರ ಪ್ರೋತ್ಸಾಹಧನ ನೀಡಬೇಕು. ಅಥವಾ ಸ್ವಾಮಿನಾಥನ್‌ ವರದಿ ಶಿಫಾರಸಿನಂತೆ ರೂ.7500 ಬೆಂಬಲ ಬೆಲೆ ನೀಡಬೇಕು.

- ಮಾರುತಿ ಮಾನ್ಪಡೆ , ಅಧ್ಯಕ್ಷ, ಕರ್ನಾಟಕ ಪ್ರಾಂತ ರೈತ ಸಂಘ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ