ಆ್ಯಪ್ನಗರ

ರೈಲಿನಲ್ಲಿ ಕಳ್ಳತನ: ಆರೋಪಿ ಅರೆಸ್ಟ್‌

ಜಿಲ್ಲೆಯ ವಾಡಿ ರೈಲ್ವೆ ಪೊಲೀಸರು ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಲ್ಲಿಕಾರ್ಜುನ ಅಲಿಯಾಸ್‌ ಜಮೀರ್‌ ಸಂಗಪ್ಪ (26) ಎಂಬಾತನನ್ನು ಬಂಧಿಸಿ ಆತನಿಂದ ಬಂಗಾರದ ಒಡವೆ ಮತ್ತು ಮೊಬೈಲ್‌ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

Vijaya Karnataka 31 Jan 2019, 5:00 am
ಕಲಬುರಗಿ :ಜಿಲ್ಲೆಯ ವಾಡಿ ರೈಲ್ವೆ ಪೊಲೀಸರು ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಲ್ಲಿಕಾರ್ಜುನ ಅಲಿಯಾಸ್‌ ಜಮೀರ್‌ ಸಂಗಪ್ಪ (26) ಎಂಬಾತನನ್ನು ಬಂಧಿಸಿ ಆತನಿಂದ ಬಂಗಾರದ ಒಡವೆ ಮತ್ತು ಮೊಬೈಲ್‌ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
Vijaya Karnataka Web theft of the train arrest accused
ರೈಲಿನಲ್ಲಿ ಕಳ್ಳತನ: ಆರೋಪಿ ಅರೆಸ್ಟ್‌


2 ಮೊಬೈಲ್‌ಗಳು 97 ಗ್ರಾಂ ಬಂಗಾರದ ವಿವಿಧ ಒಡವೆಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಅವುಗಳ ಒಟ್ಟು ಮೌಲ್ಯ 3.27,989 ರೂ.ಗಳಾಗಿದೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಲ್ಲಿಕಾರ್ಜುನ ಒಟ್ಟು ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಿವಿಧ ರೈಲುಗಳಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಕೈವಾಡ ಹೊಂದಿದ್ದ ಎಂದು ಹೇಳಲಾಗಿದೆ.

ಡಿವೈಎಸ್ಪಿ ಮಹೇಶ ಮೇಘಣ್ಣನವರ್‌ ಮತ್ತು ಸಿಪಿಐ ಶ್ಯಾಮರಾವ್‌ ಸಜ್ಜನ್‌ ಅವರ ಮಾರ್ಗದರ್ಶನದಲ್ಲಿ ವಾಡಿ ಪಿಎಸ್‌ಐ ವೀರಭದ್ರ ಹಾಗೂ ವಾಡಿ ರೈಲ್ವೆ ಠಾಣೆಯ ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ