ಆ್ಯಪ್ನಗರ

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಭಿನ್ನ ಬಣಗಳಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಯಾವುದೇ ಭಿನ್ನ ಬಣಗಳಿಲ್ಲ. ಇರುವುದು ಒಂದೆ ಬಣ. ಅದು ಕಾಂಗ್ರೆಸ್ ಬಣ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Vijaya Karnataka Web 21 Jan 2020, 4:30 pm
ಕಲಬುರಗಿ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಯಾವುದೇ ಭಿನ್ನ ಬಣಗಳಿಲ್ಲ. ಇರುವುದು ಒಂದೆ ಬಣ. ಅದು ಕಾಂಗ್ರೆಸ್ ಬಣ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Vijaya Karnataka Web mallikarjun kharge


ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ಅವರ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರು:
ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕ ಕುರಿತ ಮಾತನಾಡಿ, ಕೆಲವೊಂದು ರಾಜ್ಯಗಳಲ್ಲಿ ರಾಜ್ಯ ಕಾಂಗ್ರೆಸ್‌ಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಿಸಿದ್ದಾರೆ. ಅದೇ ರೀತಿಯಲ್ಲಿ ನಮ್ಮ ರಾಜ್ಯದಲ್ಲೂ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ಚಿಂತನೆ ಹೈಕಮಾಂಡ್‌ಗೆ ಇದೆ ಎಂದು ಹೇಳಿದರು.

ಕೆಪಿಸಿಸಿ ಪಟ್ಟ ಮತ್ತಷ್ಟು ವಿಳಂಬ: ನನಗೆ ಅಧ್ಯಕ್ಷಗಿರಿ ಓಕೆ, ಜೊತೆ ಕಾರ್ಯಾಧ್ಯಕ್ಷರೇಕೆ? ಎನ್ನುತ್ತಿರುವ ಡಿಕೆಶಿ

ಸಿಎಎ, ಎನ್‌ಆರ್‌ಸಿ ವಾಪಸ್‌ ಪಡೆಯಬೇಕು:
ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಎ ವಿರುದ್ಧ ಈಗಾಗಲೆ ಜನಾಕ್ರೋಶ ವ್ಯಕ್ತವಾಗಿದೆ. ಅದಕ್ಕಾಗಿ ಇಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ದೇಶದ ಜನರ ವಿರುದ್ಧವಾಗಿ ಪೌರತ್ವ ತಿದ್ದುಪಡಿ ಮಸೂದೆ ಜಾರಿ ತರಲಾಗಿದೆ. ಮಸೂದೆಯನ್ನ ವಾಪಸ್ ಪಡೆಯುವಂತೆ ಸಮಾವೇಶದಲ್ಲಿ ಒಕ್ಕೂರಲಿನಿಂದ ಕೇಂದ್ರಕ್ಕೆ ಆಗ್ರಹಿಸಲಾಗುವುದು ಎಂದರು.

‘ಸಮನ್ವಯ ಸಮಿತಿ’ ರಚನೆಗೆ ಮೂಡುತ್ತಿಲ್ಲ ಸಮನ್ವಯ ;ಗೊಂದಲದ ಗೂಡಾದ ಕೈ ಪಾಳಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ