ಆ್ಯಪ್ನಗರ

ಕೆಪಿಸಿಸಿ ಅಧ್ಯಕ್ಷರ ಮಾಹಿತಿ ಇಲ್ಲ: ಖರ್ಗೆ

'ನನಗೆ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವ ಕುರಿತು ಯಾವುದೇ ಮಾಹಿತಿ ಇಲ್ಲ. ನಾನು ಆ ಗೋಜಿಗೂ ಹೋಗಿಲ್ಲ' ಎಂದು ಲೋಕಸಭೆ ಕಾಂಗ್ರೆಸ್ ಸಂಸದೀ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿಕ ಸುದ್ದಿಲೋಕ 11 May 2017, 10:56 am
ಕಲಬುರಗಿ: 'ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವ ಕುರಿತು ಯಾವುದೇ ಮಾಹಿತಿ ಇಲ್ಲ. ನಾನು ಆ ಗೋಜಿಗೂ ಹೋಗಿಲ್ಲ' ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Vijaya Karnataka Web there is no information about kpcc president kharge
ಕೆಪಿಸಿಸಿ ಅಧ್ಯಕ್ಷರ ಮಾಹಿತಿ ಇಲ್ಲ: ಖರ್ಗೆ


ಕಲಬುರಗಿಯಲ್ಲಿ ಮಾತನಾಡಿದ ಅವರು, 'ಈ ಹಿಂದೆ ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದಾಗ ನಾನು ಮಲೇಶಿಯಾದಲ್ಲಿ ಇದೆ. ನಾನು ಯಾವುದನ್ನು ಕೇಳಿರಲಿಲ್ಲ. ಆದರೂ ಪಕ್ಷ ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು' ಎಂದಿದ್ದಾರೆ.

ಇಲ್ಲಿಯವರೆಗೆ ಅಧ್ಯಕ್ಷರ ನೇಮಕ ಕುರಿತು ಹೈಕಮಾಂಡ್‌ ನನ್ನನ್ನು ಕೇಳಿಲ್ಲ. ಆದರೆ, ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೈಕಮಾಂಡ್ ಅಧ್ಯಕ್ಷರ ನೇಮಕದ ಕುರಿತು ನನ್ನನ್ನು ಕರೆದು ಕೇಳಿದರೆ, ನನ್ನ ಅಭಿಪ್ರಾಯ ಹೇಳಬಹುದು. ಊಹಾಪೋಹಗಳ ಮೇಲೆ ಮಾತನಾಡುವುದು ಸರಿಯಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ. ಅವರು ಏನು ಹೇಳುತ್ತಾರೊ ಅದನ್ನು ಪಾಲಿಸುತ್ತೇನೆ ಎಂದು ಹೇಳಿದರು.

ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಹೀಗಾಗಿ ಯಾರು ಪಕ್ಷವನ್ನು ತೊರೆಯಬಾರದು. ಪಕ್ಷದಲ್ಲಿಯೇ ಇದ್ದು ಪಕ್ಷವನ್ನು ಬಲಪಡಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ