ಆ್ಯಪ್ನಗರ

135 ಮಂದಿಗೆ ಕೊರೊನಾ: 2418 ಕ್ಕೇರಿದ ಸೋಂಕಿತರ ಸಂಖ್ಯೆ! 47 ಬಲಿ!

ರಾಜ್ಯದಲ್ಲಿ ಬುಧವಾರ ಒಂದೇ ದಿನ 135 ಹೊಸ ಕೊರೊನಾ ಪ್ರಕರಣಗಳು ದೃಢವಾಗಿವೆ. ಈ ಮೂಲಕ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ. ಇದುವೆರೆಗೆ ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ಒಟ್ಟು 47 ಮಂದಿ ಬಲಿಯಾಗಿದ್ದಾರೆ.

Vijaya Karnataka Web 27 May 2020, 6:34 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಾಜ್ಯದಲ್ಲಿ ಡೆಡ್ಲಿ ವೈರಸ್ ಪ್ರತಿದಿನವೂ ಶತಕದ ಮೇಲೆ ಶತಕದ ಆಟ ಆಡುತ್ತಿದೆ. ಬುಧವಾರ ಒಂದೇ ದಿನ 135 ಹೊಸ ಕೊರೊನಾ ಪ್ರಕರಣಗಳು ದೃಢವಾಗಿವೆ.
Vijaya Karnataka Web Coronavirus 6


ಆರೋಗ್ಯ ಇಲಾಖೆಯ ಬುಧವಾರದ ಮಧ್ಯಾಹ್ನದ ಹೆಲ್ತ್‌ ಬುಲೆಟಿನ್‌ನಲ್ಲಿ 122 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ಸಂಜೆಯ ಬುಲೆಟಿನ್‌ನಲ್ಲಿ ಮತ್ತೆ 13 ಪ್ರಕರಣಗಳು ಪತ್ತೆಯಾಗಿದ್ದು, ಬುಧವಾರ ಒಂದೇ ದಿನ 135 ಮಂದಿ ಸೋಂಕಿಗೆ ಒಳಗಾದಂತಾಗಿದೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 2418ಕ್ಕೆ ಏರಿಕೆಯಾಗಿದೆ.

ಇದುವೆರೆಗೆ ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ಒಟ್ಟು 47 ಮಂದಿ ಬಲಿಯಾಗಿದ್ದಾರೆ. ಬುಧವಾರ ಒಂದೇ ದಿನ ರಾಜ್ಯದಲ್ಲಿ ಮೂವರು ಕೊರೊನಾಕ್ಕೆ ಬಲಿಯಾಗಿದ್ದಾರೆ.

ಇದುವರೆಗೆ 781 ಮಂದಿ ಪೂರ್ಣವಾಗಿ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. 1588 ಮಂದಿಯಲ್ಲಿ ಕೊರೊನಾ ವೈರಸ್‌ ಸಕ್ರಿಯವಾಗಿದೆ. ಒಟ್ಟು 14 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಇಂದು 13 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ‌. ಒಟ್ಟು ಸೋಂಕಿತರ ಸಂಖ್ಯೆ 108 ಕ್ಕೆ ಏರಿಕೆಯಾಗಿದೆ. ಓರ್ವ ಕೊರೊನಾ ಸೋಂಕಿತ ಇಂದು ಮೃತಪಟ್ಟಿದ್ದಾನೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಬುಧವಾರ 6 ಹೊಸ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.

ಕಲಬುರಗಿಯಲ್ಲಿ ಇಂದು ಒಂದೇ ದಿನ 28 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ.

ಹಾಸನದಲ್ಲಿ ಇಂದು 15 ಹೊಸ ಸೋಂಕುಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 127ಕ್ಕೆ ಏರಿಕೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ