ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ನಾಗಾಲೋಟ ಮುಂದುವರಿಸಿದೆ. ನೈಟ್ ಕರ್ಫ್ಯೂ ವಿಧಿಸಲಾಗಿದ್ದರೂ ಅದರಿಂದ ನಯಾಪೈಸೆ ಪ್ರಯೋಜನವಾಗುತ್ತಿಲ್ಲ. ಬುಧವಾರ ಕೂಡ 23,558 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 12.2 ಲಕ್ಷ ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಕೊರನಾ ಸೋಂಕಿನಿಂದಾಗಿ ರಾಜ್ಯದಲ್ಲಿ ಸೋಮವಾರ 116 ಮಂದಿ ಮೃತಪಟ್ಟಿದ್ದಾರೆ. 904 ಸೋಂಕಿತರ ಪರಿಸ್ಥಿತಿ ಗಂಭೀರವಾಗಿದ್ದು, ಕೋವಿಡ್ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 6412 ಮಂದಿ ಗುಣವಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 10,32,233 ಜನರು ಸಂಪೂರ್ಣವಾಗಿ ಗುಣಮುಖರಾದಂತಾಗಿದೆ. ರಾಜ್ಯದಲ್ಲಿ ಪ್ರಸ್ತುತ 1,76,188 ಸಕ್ರಿಯ ಸೋಂಕಿತರಿದ್ದಾರೆ. ಇಂದು ನಡೆಸಿದ ಒಟ್ಟು ಪರೀಕ್ಷೆಗಳಿಗೆ ಹೋಲಿಸಿದರೆ ಸೋಂಕು ಪತ್ತೆ ಪ್ರಮಾಣ ಶೇ.15.47ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಸಂಭವಿಸುವ ಮರಣ ಪ್ರಮಾಣ ಶೇ. 0.49ರಷ್ಟಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ ಒಂದರಲ್ಲೇ 13,640 ಜನರಿಗೆ ಸೋಂಕು ದೃಢಪಟ್ಟಿದೆ. ನಗರದಲ್ಲಿ 70 ಸೋಂಕಿತರು ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಉಳಿದಂತೆ ಬೀದರ್ನಲ್ಲಿ 5, ಹಾಸನ 3, ಕಲಬುರಗಿ 8, ಮಂಡ್ಯ 2, ರಾಮನಗರ 2, ವಿಜಯಪುರ 2 ಹಾಗೂ ಯಾದಗಿರಿ, ಉತ್ತರ ಕನ್ನಡ, ತುಮಕೂರು, ಶಿವಮೊಗ್ಗ, ರಾಯಚೂರು, ಕೋಲಾರ, ಕೊಡಗು, ಹಾವೇರಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ತಲಾ ಒಬ್ಬರು ಸೋಕಿನಿಂದ ಮೃತಪಟ್ಟಿದ್ದಾರೆ.
ಇದುವರೆಗೆ 10 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ
ದೇಶಾದ್ಯಂತ ತ್ವರಿತಗತಿಯಲ್ಲಿ ಲಸಿಕೆ ನೀಡಲಾಗುತ್ತಿದ್ದು, ಇದುವರೆಗೆ 10 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಪ್ರಸ್ತುತ 2 ಬಗೆಯ (ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್) ದೇಶೀಯ ಲಸಿಕೆ ನೀಡಲಾಗುತ್ತಿದೆ.
ಕೋವ್ಯಾಕ್ಸಿನ್: ಇದುವರೆಗೆ 93, 56,436 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಮೊದಲ ಡೋಸ್ ಲಸಿಕೆ ಪಡೆದ ನಂತರ 4208(ಶೇ.0.04) ಮಂದಿ ಸೋಂಕಿಗೆ ಒಳಗಾಗಿದ್ದಾರೆ. 17,37,178 ಮಂದಿ ಕೋವ್ಯಾಕ್ಸಿನ್ 2ನೇ ಡೋಸ್ ಬಡೆದಿದ್ದಾರೆ. ಎರಡನೇ ಡೋಸ್ ಪಡೆದ ನಂತರವೂ 695 ಮಂದಿಗೆ (ಶೇ. 0.04) ಕೋವಿಡ್ ಸೋಂಕು ತಗುಲಿದೆ.
ಕೋವಿಶೀಲ್ಡ್: ಇದುವರೆಗೆ 10 ಕೋಟಿಗೂ ಹೆಚ್ಚು ಮಂದಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಫಸ್ಟ್ ಡೋಸ್ ನಂತರ 17, 145 ಮಂದಿಗೆ (ಶೇ.0.02) ಸೋಂಕು ತಗುಲಿದೆ. 1,57,32,754 ಮಂದಿಗೆ ಸೆಕೆಂಡ್ ಡೋಸ್ ಪಡೆದಿದ್ದಾರೆ. ಎರಡನೇ ಡೋಸ್ ಪಡೆದ ನಂತರವೂ 5014 ಮಂದಿ (ಶೇ.0.03) ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.