ಆ್ಯಪ್ನಗರ

ಶಾಸಕರು, ಸಚಿವರ ಸಂಬಳದಲ್ಲಿ ಶೇ. 30 ರಷ್ಟು ಕಡಿತ, ಕ್ಯಾಬಿನೆಟ್‌ ಸಭೆಯಲ್ಲಿ ನಿರ್ಧಾರ

ಕೊರೊನಾ ಲಾಕ್‌ಡೌನ್ ಕಾರಣಕ್ಕಾಗಿ ರಾಜ್ಯದ ಶಾಸಕರು ಹಾಗು ಸಚಿವರ ಸಂಬಳದಲ್ಲಿ ಶೇ. 30 ರಷ್ಟು ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Vijaya Karnataka Web 9 Apr 2020, 1:56 pm
ಬೆಂಗಳೂರು: ಕೊರೊನಾ ಲಾಕ್‌ಡೌನ್ ಕಾರಣದಿಂದಾಗಿ ಶಾಸಕರು ಹಾಗೂ ಸಚಿವರಿಗೆ ನೀಡಲಾಗುತ್ತಿರುವ ಸಂಬಳದಲ್ಲಿ ಶೇ. 30 ರಷ್ಟು ಕಡಿತಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ.
Vijaya Karnataka Web bs yeddyurappa


ಗುರುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವಾರು ವಿಚಾರಗಳು ಕುರಿತಾಗಿ ಚರ್ಚೆ ನಡೆದಿದ್ದು ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಕೊರೊನಾ ಪೀಡಿತ ಗದಗದ ವೃದ್ಧೆ ನಿಧನ, ರಾಜ್ಯದಲ್ಲಿ 6ನೇ ಬಲಿ; ಹೊಸದಾಗಿ 10 ಜನರಿಗೆ ಸೋಂಕು

ಈ ಕುರಿತಾಗಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳ ಕುರಿತಾಗಿ ಮಾಹಿತಿ ನೀಡಿದರು. ಶಾಸಕರು, ಸಚಿವರ ವೇತನದ ಹಣ ಸೇರಿ ಒಟ್ಟು 15 ಕೋಟಿ ಮೊತ್ತವನ್ನು ಕೋವಿಡ್‌ -19 ಪರಿಹಾರ ನಿಧಿಗೆ ವರ್ಗಾವಣೆ ಮಾಡಲಾಗುತ್ತದೆ.

ಇಷ್ಟೇ ಅಲ್ಲದೆ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಎಸ್‌ಟಿ ತೆರಿಗೆ ಕಟ್ಟಲು ಜೂನ್‌ ತಿಂಗಳ ವರೆಗೂ ಅವಕಾಶವನ್ನು ಕಲ್ಪಿಸಲಾಗಿದೆ. ಲಾಕ್‌ಡೌನ್‌ನಿಂದ ಹೂ ಬೆಳೆಗಾರರಿಗೆ ಸಾಕಷ್ಟು ನಷ್ಟವಾಗುತ್ತಿದ್ದುಈ ಕುರಿತಾಗಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 9 ರ ವರೆಗೆ 191 ಪ್ರಕರಣಗಳು ದಾಖಲಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ