ಆ್ಯಪ್ನಗರ

ಆಶಾ ಕಾರ್ಯಕರ್ತರಿಗೆ 3,000 ಪ್ರೋತ್ಸಾಹ ಧನ: ಸಂಪುಟ ಸಭೆ ನಿರ್ಧಾರ

ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿದ ಮಾಧುಸ್ವಾಮಿ, “ಒಂದು ಬಾರಿ ಸೆಟ್ಲ್‌ಮೆಂಟ್ ಅಡಿ ಆಶಾ ಕಾರ್ಯಕರ್ತರಿಗೆ 3,000 ಸಾವಿರ ರೂಪಾಯಿ ನೀಡಲಾಗುತ್ತದೆ. 12.48 ಕೋಟಿ ರೂಪಾಯಿ ವೆಚ್ಚದಲ್ಲಿ 41,628 ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡಲಾಗುವುದು,” ಎಂದರು.

Vijaya Karnataka 17 Jan 2020, 6:53 pm
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆಶಾ ಕಾರ್ಯಕರ್ತರ ಬೃಹತ್‌ ಪ್ರತಿಭಟನೆ ಹಿನ್ನೆಲೆಯಲ್ಲಿ ಇವರಿಗೆಲ್ಲ ಪ್ರೋತ್ಸಾಹ ಧನ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂಬುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆಸಿ ಮಾಧುಸ್ವಾಮಿ ವಿವರಿಸಿದರು.
Vijaya Karnataka Web JC Madhu Swamy


ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿದ ಅವರು, “ಒಂದು ಬಾರಿ ಸೆಟ್ಲ್‌ಮೆಂಟ್ ಅಡಿ 3,000 ಸಾವಿರ ರೂಪಾಯಿ ನೀಡಲಾಗುತ್ತದೆ. 12.48 ಕೋಟಿ ರೂಪಾಯಿ ವೆಚ್ಚದಲ್ಲಿ 41,628 ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡಲಾಗುವುದು,” ಎಂದರು.

ಮಾಜಿ ಸ್ಪೀಕರ್‌ ಕೆಜಿ‌ ಬೋಪಯ್ಯ ನೇತೃತ್ವದಲ್ಲಿ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ರಚನೆಗೆ ನಿರ್ಧರಿಸಲಾಗಿದೆ. 5 ಮಂದಿ ಸದಸ್ಯರ ಸಮಿತಿ ಇದಾಗಿದ್ದು, ಆರಗ ಜ್ಞಾನೇಂದ್ರ, ಎಸ್ಆರ್ ವಿಶ್ವನಾಥ್, ಎಟಿ‌ ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ್, ರಾಜೂಗೌಡ ಸಮಿತಿಯಲ್ಲಿ ಇರಲಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತು ತನಿಖೆಗೆ ನೇಮಕವಾಗಿರುವ ಎಸ್‌ಐಟಿ ಅವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆಗೂ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. “ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇವಿಎಂಗಳನ್ನು ಸಂಗ್ರಹಿಸಿಡಲು ಗೋದಾಮುಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇವಿಎಂ ಸಂರಕ್ಷಣೆ ಮಾಡಲಾಗುತ್ತದೆ. ಇವಿಎಂ ಗೋದಾಮುಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ವೆಚ್ಚವಾಗಲಿದೆ,” ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಕೂಡ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ