ಆ್ಯಪ್ನಗರ

ಕ್ರೈಸ್ತರ ಒಳಿತಿಗಾಗಿಯೇ ರಾಜ್ಯದ ಚರ್ಚ್‌ಗಳ ಸಮೀಕ್ಷೆ ಮಾಡಲಾಗ್ತಿದೆ; ಹೈಕೋರ್ಟ್‌ನಲ್ಲಿ ಸರ್ಕಾರ ಸಮರ್ಥನೆ

2011ರಿಂದ ಈವರೆಗೆ ಕ್ರೈಸ್ತರ ಅಭಿವೃದ್ಧಿ ಯೋಜನೆಯಡಿ ಒಟ್ಟು 1923 ಕ್ರೈಸ್ತ ಸಂಸ್ಥೆಗಳಿಗೆ ಸುಮಾರು 412 ಕೋಟಿ ರೂ. ಮಂಜೂರು ಮಾಡಲಾಗಿದೆ. ಈ ಯೊಜನೆಯ ಸೌಲಭ್ಯಗಳನ್ನು ಕ್ರೈಸ್ತ ಸಮುದಾಯದವರಿಗೆ ತಲುಪಿಸುವ ಉದ್ದೇಶದಿಂದ 2021ರ ಜು.7ರಂದು ಎಲ್ಲಾ ಜಿಲ್ಲೆಗಳಲ್ಲಿರುವ ಚರ್ಚ್ಗಳ ಮಾಹಿತಿ ಸಂಗ್ರಹಿಸಲು ಆದೇಶ ನೀಡಲಾಗಿತ್ತು’ ಎಂದು ಸರಕಾರ ತಿಳಿಸಿದೆ.

Vijaya Karnataka 4 Dec 2021, 8:41 am
ಬೆಂಗಳೂರು: ರಾಜ್ಯದಲ್ಲಿನ ಚರ್ಚ್‌ಗಳ ಮಾಹಿತಿ ಸಂಗ್ರಹಿಸುತ್ತಿರುವ ಉದ್ದೇಶ ಕ್ರೈಸ್ತ ಸಮುದಾಯದವರ ಕಲ್ಯಾಣಗಾಗಿಯೇ ಹೊರತು ಅನ್ಯ ಉದ್ದೇಶವಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ ಮುಂದೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
Vijaya Karnataka Web Church


ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ (ಪಿಯುಸಿಎಲ್‌) ರಾಜ್ಯದಲ್ಲಿನ ಚರ್ಚ್‌ಗಳ ಮಾಹಿತಿ ಸಂಗ್ರಹಿಸಲು ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಸೂಚಿಸಿ 2021ರ ಜು.7ರಂದು ಸರಕಾರ ಹೊರಡಿಸಿದ ಸುತ್ತೋಲೆ ರದ್ದು ಕೋರಿ ಸಲ್ಲಿಸಿರುವ ಪಿಐಎಲ್‌ನಲ್ಲಿಆಕ್ಷೇಪಣೆ ಸಲ್ಲಿಸಿರುವ ಸರಕಾರ ತನ್ನ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ನ್ಯಾಯಾಲಯದ ನಿರ್ದೇಶನದಂತೆ ಆಕ್ಷೇಪಣೆ ಹೇಳಿಕೆ ಸಲ್ಲಿಸಿರುವ ಸರಕಾರ ‘ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣದ ಹೊಣೆ ಹೊರಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ, ನವೀಕರಣ, ವಸತಿ ಸಹಿತ ಶಾಲೆ ಮತ್ತು ವಸತಿ ರಹಿತ ಶಾಲೆಗಳ ಆರಂಭ, ಹಾಸ್ಟೆಲ್‌ ನಿರ್ಮಾಣ, ಚರ್ಚ್, ಗುರುದ್ವಾರ, ಜೈನ್‌ ಬಸದಿಗಳ ದುರಸ್ತಿ ಕಾರ್ಯ ಮತ್ತು ಅನಾಥಾಶ್ರಮಗಳಿಗೆ ಹಣಕಾಸು ನೆರವು ಕಲ್ಪಿಸುವುದನ್ನು ನಿರ್ದೇಶನಾಲಯ ನೋಡಿಕೊಳ್ಳುತ್ತದೆ. ಅಲ್ಪಸಂಖ್ಯಾತ ಸಮುದಾಯಗಳ ಕ್ಷೇಮಾಭಿವೃದ್ಧಿಗೆ ಸೂಕ್ತ ಯೋಜನೆ ಕಾರ್ಯಧಿರೂಪಕ್ಕೆ ತರುತ್ತದೆ. ಅದಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಹಣ ನಿಗದಿಪಡಿಸಲಾಗಿದೆ’ ಎಂದು ಸರಕಾರ ಹೇಳಿದೆ.
ಪ್ರಧಾನಿ ಮೋದಿ ಜೊತೆ ದೇವೇಗೌಡರು ಈಗ ಭಾಯಿ ಭಾಯಿ! ಸಿದ್ದರಾಮಯ್ಯ ಟೀಕೆ
‘ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಸೂಕ್ತ ಹಾಗೂ ಸಂಪೂರ್ಣ ಮಾಹಿತಿ ಇಲ್ಲದಿದ್ದರೆ ಅವುಗಳಿಗೆ ಹಣ ಮೀಸಲಿಡಲು ಮತ್ತು ಬಜೆಟ್‌ನಲ್ಲಿ ರೂಪಿಸಿದ ಕಾರ್ಯಕ್ರಮ ಜಾರಿಯಾಗದು. 2011ರಿಂದ ಈವರೆಗೆ ಕ್ರೈಸ್ತರ ಅಭಿವೃದ್ಧಿ ಯೋಜನೆಯಡಿ ಒಟ್ಟು 1923 ಕ್ರೈಸ್ತ ಸಂಸ್ಥೆಗಳಿಗೆ ಸುಮಾರು 412 ಕೋಟಿ ರೂ. ಮಂಜೂರು ಮಾಡಲಾಗಿದೆ. ಈ ಯೊಜನೆಯ ಸೌಲಭ್ಯಗಳನ್ನು ಕ್ರೈಸ್ತ ಸಮುದಾಯದವರಿಗೆ ತಲುಪಿಸುವ ಉದ್ದೇಶದಿಂದ 2021ರ ಜು.7ರಂದು ಎಲ್ಲಾ ಜಿಲ್ಲೆಗಳಲ್ಲಿರುವ ಚರ್ಚ್ಗಳ ಮಾಹಿತಿ ಸಂಗ್ರಹಿಸಲು ಆದೇಶ ನೀಡಲಾಗಿತ್ತು’ ಎಂದು ಸರಕಾರ ತಿಳಿಸಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯ ಜು.7ರಂದು ಹೊರಡಿಸಿರುವ ಸುತ್ತೋಲೆ ಅರ್ಥಹೀನವಾಗಿದ್ದು, ತಾರತಮ್ಯದಿಂದ ಕೂಡಿದೆ. ಸಮೀಕ್ಷೆಯಲ್ಲಿ ಚರ್ಚ್‌ಗಳು ಇರುವ ಸ್ಥಳ, ತಾಲೂಕು, ಜಿಲ್ಲೆ ಹಾಗೂ ಅವುಗಳ ವಿಧಾನಸಭಾ ಕೇತ್ರ ವ್ಯಾಪ್ತಿಯ ದತ್ತಾಂಶ ಮತ್ತು ಚರ್ಚ್ಗಳ ಹೆಸರು, ವಿಳಾಸ, ಖಾತೆ ಸಂಖ್ಯೆ, ಸರ್ವೆ ಸಂಖ್ಯೆ ಹಾಗೂ ಪಾದ್ರಿಗಳ ವಿವರಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ. ಆ ಮೂಲಕ ಧರ್ಮದ ಆಧಾರದಲ್ಲಿ ಕ್ರೈಸ್ತರಿಗೆ ಕಿರುಕುಳ ನೀಡುತ್ತಿದೆ. ಇದು ಕ್ರೈಸ್ತರ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ,'' ಎಂದು ದೂರಿರುವ ಅರ್ಜಿದಾರರು ಸುತ್ತೋಲೆ ರದ್ದುಪಡಿಸಲು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ