ಆ್ಯಪ್ನಗರ

ಕ್ಷಮೆ ಕೋರಲು ಎಚ್‌.ಡಿ.ರೇವಣ್ಣಗೆ ಮುಸ್ಲಿಂ ಯೂನಿಟಿ ಆಗ್ರಹ

ಮುಸ್ಲಿಂ ನಾಯಕರ ಕುರಿತು ಕೀಳಾಗಿ ಮಾತನಾಡಿರುವುದಕ್ಕೆ ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಮುಸ್ಲಿಂ ಯೂನಿಟಿ ಕೇಂದ್ರ ಸಮಿತಿ ಆಗ್ರಹಿಸಿದೆ.

Vijaya Karnataka 10 Oct 2017, 8:40 am

ಬೆಂಗಳೂರು: ಮುಸ್ಲಿಂ ನಾಯಕರ ಕುರಿತು ಕೀಳಾಗಿ ಮಾತನಾಡಿರುವುದಕ್ಕೆ ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಮುಸ್ಲಿಂ ಯೂನಿಟಿ ಕೇಂದ್ರ ಸಮಿತಿ ಆಗ್ರಹಿಸಿದೆ.

''ರೇವಣ್ಣ ಅವಹೇಳನಕಾರಿ ಹೇಳಿಕೆಯಿಂದ ಸಮುದಾಯದ ಜನರ ಮನಸ್ಸಿಗೆ ನೋವಾಗಿದೆ. ಕ್ಷಮೆಯಾಚಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,'' ಎಂದು ಮುಸ್ಲಿಂ ಯೂನಿಟಿ ಅಧ್ಯಕ್ಷ ಎ.ಜೆ.ಖಾನ್‌ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

''ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಜುಬೈರ್‌ ಎಂಬ ವ್ಯಕ್ತಿಯ ಕೊಲೆ ಹಿನ್ನೆಲೆಯಲ್ಲಿ ಬಿಜೆಪಿಯು ರಾಜಕೀಯ ಪ್ರೇರಿತವಾಗಿ ಸಚಿವ ಯು.ಟಿ.ಖಾದರ್‌ ಅವರ ರಾಜೀನಾಮೆಗೆ ಆಗ್ರಹಿಸಿರುವುದು ಖಂಡನೀಯ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸಚಿವ ತನ್ವೀರ್‌ ಸೇಠ್‌ ನಿವಾಸಕ್ಕೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿರುವುದು ಸಂವಿಧಾನ ಬಾಹಿರವಾಗಿದೆ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು,'' ಎಂದು ಅವರು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ