ಆ್ಯಪ್ನಗರ

ಅಕಾಡೆಮಿ, ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ

ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಆರು ಅಕಾಡೆಮಿಗಳು ಹಾಗೂ ಎರಡು ಪ್ರಾಧಿಕಾರಗಳಿಗೆ ರಾಜ್ಯ ಸರಕಾರ ಕೊನೆಗೂ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ವಿಕ ಸುದ್ದಿಲೋಕ 8 Aug 2017, 8:05 am
ಬೆಂಗಳೂರು: ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಆರು ಅಕಾಡೆಮಿಗಳು ಹಾಗೂ ಎರಡು ಪ್ರಾಧಿಕಾರಗಳಿಗೆ ರಾಜ್ಯ ಸರಕಾರ ಕೊನೆಗೂ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
Vijaya Karnataka Web academy gets new chief
ಅಕಾಡೆಮಿ, ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ


ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರಾವಧಿ ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಅಥವಾ ಮುಂಬರುವ ಮೂರು ವರ್ಷಗಳ ಅವಧಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅದು ಜಾರಿಯಲ್ಲಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಸದಸ್ಯರ ಸಂಖ್ಯೆಯನ್ನು 10ರಿಂದ 15ಕ್ಕೆ, ತುಳು ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಗಳ ಸದಸ್ಯರ ಸಂಖ್ಯೆಯನ್ನು 10ರಿಂದ 12ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಅಕಾಡೆಮಿ: ಡಾ. ಅರವಿಂದ ಮಾಲಗತ್ತಿ

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ: ಡಾ.ಕೆ. ಮರುಳ ಸಿದ್ದಪ್ಪ

ಕನ್ನಡ ಪುಸ್ತಕ ಪ್ರಾಧಿಕಾರ: ಡಾ. ವಸುಂಧರಾ ಭೂಪತಿ

ಕರ್ನಾಟಕ ನಾಟಕ ಅಕಾಡೆಮಿ: ಜೆ.ಲೋಕೇಶ್‌

ಸಂಗೀತ-ನೃತ್ಯ ಅಕಾಡೆಮಿ: ಪಂ.ಫಯಾಜ್‌ ಖಾನ್‌.

ಜಾನಪದ ಅಕಾಡೆಮಿ: ಬಿ. ಟಾಕಪ್ಪ

ಶಿಲ್ಪಕಲಾ ಅಕಾಡೆಮಿ: ಕಾಳಾಚಾರ್‌

ತುಳು ಸಾಹಿತ್ಯ ಅಕಾಡೆಮಿ: ಎ.ಸಿ. ಭಂಡಾರಿ

Academy Gets President

Bangalore: Karnataka Govt nominated Presidents and members for academy and authority.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ