ಆ್ಯಪ್ನಗರ

ಕೊರೊನಾ ಪಾಸಿಟಿವ್‌‌ ಎಂಬುವುದು ವದಂತಿ, ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ್‌ ಸ್ಪಷ್ಟನೆ

ಕೆಎಸ್ಆರ್‌ಪಿ ಎಡಿಜಿಪಿಯಾಗಿರುವ ಅಲೋಕ್‌ ಕುಮಾರ್ ಅವರ ಕೊರೊನಾ ತಪಾಸಣಾ ವರದಿ ಬಂದಿದ್ದು ನೆಗೆಟಿವ್‌ ಆಗಿದೆ. ಅಲೋಕ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್‌ ಆಗಿದೆ ಎಂಬ ವರದಿಯೊಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.

Vijaya Karnataka Web 28 Jun 2020, 3:32 pm
ಬೆಂಗಳೂರು: ಕೆಎಸ್ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ್ ಅವರಿಗೆ ಕೋವಿಡ್‌-19 ತಪಾಸಣೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಅವರು ಟ್ವಿಟ್ಟರ್‌ನಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.
Vijaya Karnataka Web alok kumar



ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಶ್ವೇತಪತ್ರ ಹೊರಡಿಸಿ, ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಕೆಎಸ್‌ಆರ್‌ಪಿ ಕೆಲವು ಸಿಬ್ಬಂದಿಗೆ ಕೊರೊನಾ ಸೋಂಕು ಬಂದ ಹಿನ್ನೆಲೆಯಲ್ಲಿ ಅವರೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಕೋವಿಡ್‌ ತಪಾಸಣೆಗೆ ಒಳಲಾಗಿದ್ದರು.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಅಲೋಕ್‌ ಕುಮಾರ್ ಅವರಿಗೂ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಅದನ್ನು ಅವರು ನಿರಾಕರಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಸ್ಪಷ್ಟೀಕರಣ ನೀಡಿರುವ ಅಲೋಕ್ ಕುಮಾರ್, ಶನಿವಾರ ತಪಾಸಣಾ ವರದಿ ಬಂದಿದ್ದು ಕೊರೊನಾ ನೆಗೆಟಿವ್‌ ಬಂದಿದೆ ಎಂದಿದ್ದಾರೆ.

ಅಲ್ಲದೆ ನಾನು ಆರೋಗ್ಯವಾಗಿದ್ದೇನೆ. ಭಾನುವಾರ ಬೆಳಗ್ಗೆಯೂ 6.6 ಕಿಲೋ ಮೀಟರ್‌ ಜಾಗಿಂಗ್ ಮಾಡಿದ್ದೇನೆ. 30 ನಿಮಿಷಗಳ ಕಾಲ ಟೆನ್ನಿಸ್‌ ಕೂಡಾ ಆಡಿದ್ದೇನೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ