ಆ್ಯಪ್ನಗರ

ವಕೀಲರ ಪ್ರತಿಭಟನೆ:ರಾಜ್ಯಾದ್ಯಂತ ಕೋರ್ಟ್‌ ಕಲಾಪ ವ್ಯತ್ಯಯ

ವಕೀಲರ ರಕ್ಷಣಾ ಕಾಯಿದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ...

Vijaya Karnataka 13 Feb 2019, 5:00 am
ಬೆಂಗಳೂರು: ವಕೀಲರ ರಕ್ಷಣಾ ಕಾಯಿದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋರ್ಟ್‌ಗಳ ಕಲಾಪಕ್ಕೆ ಬಿಸಿ ತಟ್ಟಿತು.
Vijaya Karnataka Web 190212kpn31


ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಲಾಪದಲ್ಲಿ ವ್ಯತ್ಯಯವಾಗಿದೆ.

ಭಾರತೀಯ ವಕೀಲರ ಪರಿಷತ್‌ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು. ಹೈಕೋರ್ಟ್‌ನಲ್ಲಿ ಸ್ವಲ್ಪ ಮಟ್ಟಿಗೆ ಕೋರ್ಟ್‌ಗಳು ಕಾರ‍್ಯನಿರ್ವಹಿಸಿದವು. ಆದರೆ ಅಧೀನ ನ್ಯಾಯಾಲಯಗಳಲ್ಲಿ ಬಹುತೇಕ ಯಾವುದೆ ಕಾರ‍್ಯಕಲಾಪ ನಡೆಯಲಿಲ್ಲ. ಕೆಲವು ಕೋರ್ಟ್‌ಗಳಲ್ಲಿ ವಿಚಾರಣೆಗಳನ್ನು ಮುಂದೂಡಲಾಯಿತು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್‌ ಹಾಗೂ ವಕೀಲರ ಪರಿಷತ್‌ ಪ್ರಾಧಿಕಾರಿಗಳ ನೇತೃತ್ವದಲ್ಲಿ ನೂರಾರು ವಕೀಲರು ಸಿಟಿ ಸಿವಿಲ್‌ ಕೋರ್ಟ್‌ನಿಂದ ಹೈಕೋರ್ಟ್‌ವರೆಗೆ ಶಾಂತಿಯುತ ಮೆರವಣಿಗೆ ನಡೆಸಿ, ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿದರು.

ವಕೀಲರು ಮತ್ತು ಕಕ್ಷಿದಾರರ ಕಲ್ಯಾಣಕ್ಕೆ 5ಸಾವಿರ ಕೋಟಿ ಹಣ ಮೀಸಲಿಡಬೇಕು, ಹೊಸದಾಗಿ ವಕೀಲಿ ವೃತ್ತಿಗೆ ಬರುವ ಯುವ ವಕೀಲರಿಗೆ 10ಸಾವಿರ ರೂ. ಪ್ರೋತ್ಸಾಹಧನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಭಾರತೀಯ ವಕೀಲರ ಪರಿಷತ್‌(ಬಿಸಿಐ) ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ