ಆ್ಯಪ್ನಗರ

ದಿಲ್ಲಿಯಲ್ಲಿ ಕಾಂಗ್ರೆಸ್‌ ಸಭೆ, ಸಂಭಾವ್ಯರ ಪಟ್ಟಿ ಸಲ್ಲಿಕೆ ಸಾಧ್ಯತೆ

ಪಾರ್ಲಿಮೆಂಟ್‌ ಎಲೆಕ್ಷನ್‌ ಸಿದ್ಧತೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ದಿಲ್ಲಿಗೆ ತೆರಳಿದ್ದಾರೆ. ಇದೇ ವೇಳೆ ರಾಜ್ಯದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

Vijaya Karnataka 18 Aug 2018, 10:38 am
ಬೆಂಗಳೂರು: ಪಾರ್ಲಿಮೆಂಟ್‌ ಎಲೆಕ್ಷನ್‌ ಸಿದ್ಧತೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ದಿಲ್ಲಿಗೆ ತೆರಳಿದ್ದಾರೆ. ಇದೇ ವೇಳೆ ರಾಜ್ಯದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
Vijaya Karnataka Web dinesh gundurao


ಎಲ್ಲ ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ಈ ಸಭೆಗೆ ಆಹ್ವಾನಿಸಲಾಗಿದೆ. ಶನಿವಾರ ಈ ಸಭೆ ನಡೆಯಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಕಳಪೆ ಸಾಧನೆ ತೋರಿದ್ದ ಕಾಂಗ್ರೆಸ್‌ ಈ ಬಾರಿ ಮಿತ್ರಪಕ್ಷಗಳೊಂದಿಗೆ ಸೇರಿ ಬಿಜೆಪಿ ವಿರುದ್ಧ ಹೋರಾಡುವ ಉಮೇದಿನಲ್ಲಿದೆ. ಈ ನಿಟ್ಟಿನಲ್ಲಿ ಸಾಧ್ಯವಾಗುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದು ಪಕ್ಷದ ಉದ್ದೇಶ.

ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರುಗಳ ಸಭೆಯಲ್ಲಿ ಈ ವಿಚಾರವಾಗಿ ವಿಸ್ತ್ರತ ಚರ್ಚೆಯಾಗಲಿದೆ. ಯಾವ್ಯಾವ ರಾಜ್ಯಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂಬ ಬಗ್ಗೆಯೂ ಪಕ್ಷದ ಚೌಕಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ಕರ್ನಾಟಕದ ಪರಿಸ್ಥಿತಿ ಭಿನ್ನವಾಗಿದ್ದು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಈಗಾಗಲೇ ತೀರ್ಮಾನವಾಗಿದೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರ ಬಿಟ್ಟು ಕೊಡಬೇಕು ಎನ್ನುವುದಷ್ಟೆ ಅಂತಿಮಗೊಳ್ಳಬೇಕಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಸಂಘಟನೆ ಉತ್ತಮ ಆಗಿರುವುದರಿಂದ ಸ್ವತಂತ್ರ ಸ್ಪರ್ಧೆ ಒಳಿತು ಎನ್ನುವ ಒತ್ತಡವೂ ಸ್ಥಳೀಯವಾಗಿ ವ್ಯಕ್ತವಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಾಹುಲ್‌ ಗಾಂಧಿ ಗಮನ ಸೆಳೆಯಬಹುದು ಎನ್ನಲಾಗುತ್ತಿದೆ.

ಈ ನಡುವೆ ಲೋಕಸಭೆ ಕ್ಷೇತ್ರವಾರು ಸಭೆ ನಡೆಸಿರುವ ದಿನೇಶ್‌ ಗುಂಡೂರಾವ್‌, ಅಭಿಪ್ರಾಯ ಸಂಗ್ರಹಿಸಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅದರಂತೆ 28 ಕ್ಷೇತ್ರಗಳಿಗೂ ಸಂಭಾವ್ಯರ ಪಟ್ಟಿಯನ್ನು ಕೆಪಿಸಿಸಿ ಮಟ್ಟದಲ್ಲಿ ಸಿದ್ಧಪಡಿಸಲಾಗಿದೆ. ಈ ಬಗ್ಗೆ ಬೀದರ್‌ ಸಮಾವೇಶದಲ್ಲಿ ರಾಹುಲ್‌ ಜತೆಗೆ ಚರ್ಚಿಸಲಾಗುತ್ತದೆ ಎಂದು ಹೇಳಲಾಗಿತ್ತು. ಬೀದರ್‌ನಲ್ಲಿ ಸಮಾಲೋಚನೆ ಸಾಧ್ಯವಾಗದ್ದರಿಂದ ದಿಲ್ಲಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಬಹುದು. ಸಂಭಾವ್ಯರ ಪಟ್ಟಿಯನ್ನು ರಾಹುಲ್‌ ಅವರಿಗೆ ಹಸ್ತಾಂತರಿಸಬಹುದು ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ