ಆ್ಯಪ್ನಗರ

ಸಿಎಂ ಬಿಎಸ್‌ವೈ ಭೇಟಿಯಾದ ಅಖಂಡ ಶ್ರೀನಿವಾಸಮೂರ್ತಿ, ಸಿಬಿಐ ತನಿಖೆಗೆ ಮನವಿ

ನಾನು ಕಾಂಗ್ರೆಸ್ ಬಿಡಲ್ಲ. ನಮ್ಮ ತಂದೆಯೂ ಕಾಂಗ್ರೆಸ್‌ನಲ್ಲಿಯೇ ಇದ್ದರು. ನಾನು ಕಾಂಗ್ರೆಸ್ ಪಕ್ಷ‌ ಬಿಡೋ ಮಾತೇ ಇಲ್ಲ. ನನ್ನ ರಕ್ತದಲ್ಲಿ‌ ಇರೋದು ಕಾಂಗ್ರೆಸ್ ಎಂದು ಅಖಂಡ ಶ್ರೀನಿವಾಸಮೂರ್ತಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Vijaya Karnataka 17 Aug 2020, 6:59 pm

ಬೆಂಗಳೂರು: ಪುಲಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋಮವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಘಟನೆ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದರು.
Vijaya Karnataka Web Akhanda Srinivasmurthy


ಶಾಸಕ ಅರವಿಂದ ಲಿಂಬಾವಳಿ ಜೊತೆ ಯಡಿಯೂರಪ್ಪ ಅವರನ್ನು ಭೇಟಿಯಾದ ಅಖಂಡ ಶ್ರೀನಿವಾಸಮೂರ್ತಿ, “ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೇಳಿಕೊಂಡಿದ್ದೇನೆ. ತನಿಖೆ ಬಳಿಕ ಪರಿಶೀಲಿಸಿ ನೋಡುವುದಾಗಿ ಸಿಎಂ ಹೇಳಿದ್ದಾರೆ,” ಎಂದು ತಿಳಿಸಿದರು.

ಇದೇ ವೇಳೆ, "ನಾನು ಕಾಂಗ್ರೆಸ್ ಬಿಡಲ್ಲ. ನಮ್ಮ ತಂದೆಯೂ ಕಾಂಗ್ರೆಸ್‌ನಲ್ಲಿಯೇ ಇದ್ದರು. ನಾನು ಕಾಂಗ್ರೆಸ್ ಪಕ್ಷ‌ ಬಿಡೋ ಮಾತೇ ಇಲ್ಲ. ನನ್ನ ರಕ್ತದಲ್ಲಿ‌ ಇರೋದು ಕಾಂಗ್ರೆಸ್," ಎಂದು ಅಖಂಡ ಶ್ರೀನಿವಾಸಮೂರ್ತಿ ಸ್ಪಷ್ಟಪಡಿಸಿದರು.

ಯೋಗಿ ಆದಿತ್ಯನಾಥ್‌ ಕ್ರಮ ಅನುಸರಿಸಿದ ಬಿಎಸ್‌ವೈ: ಡಿಜೆ ಹಳ್ಳಿ ಗಲಭೆಕೋರರಿಂದಲೇ ಆಸ್ತಿ ನಷ್ಟ ವಸೂಲು

ಮೊನ್ನೆ ಮುಖ್ಯಮಂತ್ರಿಗಳ ಜೊತೆ ಫೋನಿನಲ್ಲಿ ಮಾತಾಡಿದ್ದೆ. ನಮ್ಮ ಮನೆಯ ಅಕ್ಕ ಪಕ್ಕದ ಮನೆ, ವಾಹನಗಳನ್ನು ಸುಟ್ಟಿದ್ದಾರೆ. ಇವರಿಗೆಲ್ಲ ಪರಿಹಾರ ಕೊಡಲು ಸಿಎಂಗೆ ಮನವಿ ಮಾಡಿಕೊಂಡಿದ್ದೇನೆ. ಅಪರಾಧಿಗಳು ಯಾರೇ ಇರಲಿ, ಎಷ್ಟೇ ಪ್ರಭಾವಿಗಳಾಗಿದ್ದರೂ ಶಿಕ್ಷೆ ಆಗಲೇಬೇಕು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ