ಆ್ಯಪ್ನಗರ

ಅಕ್ಕಿ ಗಿರಣಿಗಳಲ್ಲಿ ಠೇವಣಿ ಪರ್ಯಾಯ ಯೋಜನೆಗೆ ಸಲಹೆ

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿ ಅನ್ವಯ ಅಕ್ಕಿ ಗಿರಣಿಗಳಲ್ಲಿ ಠೇವಣಿ ಇಡುವುದಕ್ಕೆ ಪರ್ಯಾಯ ಯೋಜನೆ ರೂಪಿಸುವಂತೆ ಸಿಎಂ ಕುಮಾರಸ್ವಾಮಿ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Vijaya Karnataka 10 Jan 2019, 5:00 am
ಬೆಂಗಳೂರು : ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿ ಅನ್ವಯ ಅಕ್ಕಿ ಗಿರಣಿಗಳಲ್ಲಿ ಠೇವಣಿ ಇಡುವುದಕ್ಕೆ ಪರ್ಯಾಯ ಯೋಜನೆ ರೂಪಿಸುವಂತೆ ಸಿಎಂ ಕುಮಾರಸ್ವಾಮಿ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web 0901-2-2-501


ಭತ್ತ ಖರೀದಿ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಅಕ್ಕಿ ಗಿರಣಿ ಮಾಲೀಕರ ಜತೆಗೆ ಸಭೆ ನಡೆಸಿ ಈ ಸೂಚನೆ ನೀಡಿರುವ ಅವರು, ''ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಸಂಬಂಧ ಕೇಂದ್ರ ಸರಕಾರ ಮಾರ್ಗಸೂಚಿ ಬದಲಿಸಿದೆ. ರೈತರು ನೇರವಾಗಿ ಮಿಲ್‌ ಮಾಲೀಕರಿಗೆ ಭತ್ತ ನೀಡಬೇಕು. ಮಿಲ್‌ಗಳು ಅಕ್ಕಿ ತಯಾರಿಸಿ, ಆಹಾರ ನಿಗಮದ ಮೂಲಕ ಅಕ್ಕಿ ಪೂರೈಸಬೇಕು. ಈ ವಿಧಾನದಲ್ಲಿ ದಾಸ್ತಾನು ಮಾಡುವ ರೈತರ ಭತ್ತಕ್ಕೆ ಭದ್ರತೆಯಾಗಿ ಮಿಲ್‌ ಮಾಲೀಕರು ಠೇವಣಿ ಇಡಬೇಕು ಎಂದು ಸೂಚಿಸಲಾಗಿದೆ. ಆದರೆ ಮಿಲ್‌ ಮಾಲೀಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಜತೆಗೆ ಹೆಚ್ಚಿನ ಮಿಲ್‌ ಮಾಲೀಕರು ಆಹಾರ ಇಲಾಖೆಯೊಂದಿಗೆ ನೋಂದಣಿ ಮಾಡಿಕೊಂಡಿಲ್ಲ. ಪರ್ಯಾಯವಾಗಿ ಆಸ್ತಿ ಅಡಮಾನ, ಪೋಸ್ಟ್‌ ಡೇಟೆಡ್‌ ಚೆಕ್‌ ಪಡೆಯುವುದು ಅಥವಾ ಇನ್ನಾವುದೇ ಮಾರ್ಗೋಪಾಯ ಸೂಚಿಸಿ,''ಎಂದು ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲೋಕೋಪಯೋಗಿ ಸಚಿವ ಹೆಚ್‌.ಡಿ. ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು, ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ, ಶಾಸಕ ಸಿ.ಎನ್‌. ಬಾಲಕೃಷ್ಣ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ