ಆ್ಯಪ್ನಗರ

ತನಿಖಾಧಿಧಿಕಾರಿ ಬದಲಾವಣೆ ಕೋರಿ ರೆಡ್ಡಿ ಹೈಕೋರ್ಟ್‌ ಮೊರೆ

ಪ್ರಕರಣವೊಂದರ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಜೊತೆಗೆ ಡೀಲ್‌ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಸಿಸಿಬಿ ...

Vijaya Karnataka 10 Nov 2018, 5:00 am
ಬೆಂಗಳೂರು: ಪ್ರಕರಣವೊಂದರ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಜೊತೆಗೆ ಡೀಲ್‌ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ ಬದಲಾವಣೆ ಮಾಡಬೇಕು ಎಂದು ಕೋರಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web reddy


ಈ ಬಗ್ಗೆ ರೆಡ್ಡಿ ಶುಕ್ರವಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ಮುಂದಿನ ವಾರ ನ್ಯಾ.ಬಿ.ವೀರಪ್ಪ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.

''ರಾಜಕೀಯ ದುರುದ್ದೇಶದಿಂದ ಪ್ರಕರಣ ಹೂಡಲಾಗಿದೆ. ಎಸಿಪಿ ಡಾ.ಎಚ್‌.ಎನ್‌.ವೆಂಕಟೇಶ್‌ ಪ್ರಸನ್ನ ಹಾಗೂ ಡಿಸಿಪಿ ಎಸ್‌. ಗಿರೀಶ್‌ ರಾಜಕೀಯ ಒತ್ತಡಕ್ಕೆ ಒಳಗಾಗಿದ್ದಾರೆ. ಪ್ರಕರಣದಲ್ಲಿ 4ನೇ ಆರೋಪಿ ಬಳ್ಳಾರಿಯ ರಾಜಮಹಲ್‌ ಜ್ಯುವೆಲರ್ಸ್‌ ಮಾಲೀಕ ರಮೇಶ್‌ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ಬಗ್ಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಹಾಗೂ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರು ನೀಡಲಾಗಿದೆ. ತನಿಖೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಹೇಳಲಾಗಿದೆ. ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ನಡೆಸಿದ ತನಿಖೆಯ ದೃಶ್ಯಾವಳಿಯನ್ನು ಪೊಲೀಸರು ಬಹಿರಂಗಗೊಳಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಎಲ್ಲ ಮಾಹಿತಿಯನ್ನು ಮಾಧ್ಯಮ ಗೋಷ್ಠಿ ಕರೆದು ಬಹಿರಂಗಗೊಳಿಸಿದ್ದಾರೆ. ಈ ಮೂಲಕ ತನಿಖೆಯ ಗೌಪ್ಯತೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ,'' ಎಂದು ಅರ್ಜಿಯಲ್ಲಿ ನಮೂದಿಸಿದ್ದಾರೆ.

''ನನ್ನ ವಿರುದ್ಧ ಡಿ.ಜೆ.ಹಳ್ಳಿ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆಯೂ ಅವರು ಮತ್ತೊಂದು ಅರ್ಜಿಯನ್ನೂ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ