ಆ್ಯಪ್ನಗರ

ಆ್ಯಂಬಿಡೆಂಟ್‌ ಪ್ರಕರಣ: ಅಲಿಖಾನ್‌ಗೆ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಿದ ಸಿಸಿಬಿ

ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಲಿಖಾನ್‌ಗೆ ಜಾಮೀನು ನೀಡದಂತೆ ಸಿಸಿಬಿ ಅಧಿಕಾರಿಗಳು ಶುಕ್ರವಾರ ಒಂದನೇ ಎಸಿಎಂಎಂ ...

Vijaya Karnataka 1 Dec 2018, 5:00 am
ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಲಿಖಾನ್‌ಗೆ ಜಾಮೀನು ನೀಡದಂತೆ ಸಿಸಿಬಿ ಅಧಿಕಾರಿಗಳು ಶುಕ್ರವಾರ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಿದರು.
Vijaya Karnataka Web khan_


ಎಂಟು ದಿನಗಳ ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದ್ದ ಸಿಸಿಬಿ ಅಧಿಕಾರಿಗಳು ಅಲಿಖಾನ್‌ನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪೊಲೀಸ್‌ ಕಸ್ಟಡಿಯಲ್ಲಿ ಇದ್ದ ಅವಧಿಯಲ್ಲೂ ಅಲಿಖಾನ್‌ ತನಿಖೆಗೆ ಸಮರ್ಪಕವಾಗಿ ಸಹಕರಿಸಿಲ್ಲ. ಅಲ್ಲದೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಂತೆ ನಡೆದುಕೊಳ್ಳದೆ ನ್ಯಾಯಾಲಯಕ್ಕೂ ವಂಚಿಸಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.

ಅಲೋಕ್‌ಕುಮಾರ್‌ ಪರಿಶೀಲನೆ

ಆ್ಯಂಬಿಡೆಂಟ್‌ ಪ್ರಕರಣದಲ್ಲಿ ಆಗಿರುವ ತನಿಖೆ ಮತ್ತು ಹೂಡಿಕೆದಾರರ ಹಣ ಎಲ್ಲೆಲ್ಲಿ ಹೋಗಿದೆ ಎನ್ನುವ ಕುರಿತಂತೆ ಅಪರಾಧ ವಿಭಾಗದ ಹೆಚ್ಚುವರಿ ಆಯುಕ್ತ ಅಲೋಕ್‌ಕುಮಾರ್‌ ಶುಕ್ರವಾರ ಸಂಜೆ ಸತತ ಮೂರು ಗಂಟೆ ಕಾಲ ತನಿಖಾಧಿಕಾರಿಗಳ ಜತೆ ಚರ್ಚಿಸಿ, ದಾಖಲೆ ಸಂಗ್ರಹಿಸಲು ತನಿಖಾಧಿಕಾರಿಗಳಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.

ಕಾದು ವಾಪಸಾದ ಬ್ರಿಜೇಶ್‌ ರೆಡ್ಡಿ

ಆ್ಯಂಬಿಡೆಂಟ್‌ ಪ್ರಕರಣದಲ್ಲಿ ಪ್ರಮುಖ ಕೊಂಡಿಯಾಗಿದ್ದ ಉದ್ಯಮಿ ಬ್ರಿಜೇಶ್‌ ರೆಡ್ಡಿ ವಿಚಾರಣೆಗೆಂದು ಸಿಸಿಬಿ ಕಚೇರಿಯಲ್ಲಿ ಮೂರು ಗಂಟೆ ಕಾಲ ಸುಮ್ಮನೆ ಕುಳಿತಿದ್ದರು. ತನಿಖೆಯ ಪ್ರಗತಿ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದರಿಂದ ಅವರಿಗೆ ಮತ್ತೊಮ್ಮೆ ಕರೆಸುವುದಾಗಿ ವಾಪಾಸ್‌ ಕಳಿಸಿದ್ದಾಗಿ ಸಿಸಿಬಿ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ