ಆ್ಯಪ್ನಗರ

ದಿ. ಅನಂತ್ ಕುಮಾರ್ ಬಡವರ-ಶೋಷಿತರ ಪರವಾಗಿದ್ದರು- ಜೆಪಿ ನಡ್ಡಾ

ಬೆಂಗಳೂರಿನ ಜಯನಗರದ ಎನ್ಎಂಕೆಆರ್ ವಿ ಮಹಿಳಾ ಕಾಲೇಜಿನ ಮಂಗಳ ಮಂಟಪ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್ ಪ್ರತಿಷ್ಠಾನದ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಉದ್ಘಾಟಿಸಿದರು.

Vijaya Karnataka Web 22 Sep 2019, 7:50 pm
ಬೆಂಗಳೂರು: ಬಿಜೆಪಿ ನಾಯಕ ದಿವಂಗತ ಅನಂತ್ ಕುಮಾರ್ ತಮ್ಮ ರಾಜಕೀಯ ಜೀವನದುದ್ದಕ್ಕೂ ಶೋಷಿತರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
Vijaya Karnataka Web jp nadda


ಬೆಂಗಳೂರಿನ ಜಯನಗರದ ಎನ್ಎಂಕೆಆರ್ ವಿ ಮಹಿಳಾ ಕಾಲೇಜಿನ 'ಮಂಗಳ ಮಂಟಪ ಸಭಾಂಗಣ'ದಲ್ಲಿ ನಡೆದ ಅನಂತಕುಮಾರ್ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಪಕ್ಷದಲ್ಲಿ ಹಾಗೂ ಸರಕಾರದಲ್ಲಿ ಮಹತ್ವದ ಹುದ್ದೆಯನ್ನು ಅಲಂಕರಿಸಿದ್ದ ಅನಂತ್ ಕುಮಾರ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಬಡವರು ಹಾಗೂ ಶೋಷಿತರ ಪರವಾಗಿದ್ದರು. ಬಡವರಿಗೆ ಕಡಿಮೆ ದರದಲ್ಲಿ ಔಷಧಿ ದೊರೆಯುವಂತೆ ಮಾಡಿದ ಜನ ಔಷಧಿ ಯೋಜನೆ ಜಾರಿಯ ಹಿಂದೆ ದಿವಂಗತ ಅನಂತ್ ಕುಮಾರ್ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಜೆ ಪಿ ನಡ್ಡಾ ಹೇಳಿದ್ದಾರೆ. ಈ ಯೋಜನೆ ಜಾರಿಗೆ ಬಂದ ಪರಿಣಾಮ 1000 ರೂಪಾಯಿ ಮೌಲ್ಯದ ಔಷಧಗಳು 100 ರೂಪಾಯಿಗೆ ಬಡವರ ಕೈಗೆಟಕುವಂತಾಯಿತು ಎಂದರು.

ವಿಮಾನಯಾನ ಕ್ಷೇತ್ರದಲ್ಲಿ ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವಕ್ಕೆ ಅಡಿಪಾಯ ಹಾಕಿದವರು ಅನಂತ್ ಕುಮಾರ್ ಎಂದ ಜೆಪಿ ನಡ್ಡಾ ದಿವಂಗತ ಅನಂತ್ ಕುಮಾರ್ ಅವರ ಜೊತೆಗಿನ ತಮ್ಮ ರಾಜಕೀಯ ಸಹಪಯಣದ ಕುರಿತಾಗಿಯೂ ಈ ಸಂಧರ್ಭದಲ್ಲಿ ಮೆಲುಕುಹಾಕಿಕೊಂಡರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಜಗದೀಶ್ ಶೆಟ್ಟರ್, ವಿ.ಸೋಮಣ್ಣ, ವಿ.ಮುರಳೀಧರ್ ಮತ್ತಿತರರು ಭಾಗಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ