ಆ್ಯಪ್ನಗರ

ತುಳು ಭಾಷೆ ಸಂವಿಧಾನದ 8ನೇ ಪರಿಚ್ಚೇದ ಸೇರಲಿ: ಎಸ್‌. ಅಂಗಾರ ಆಗ್ರಹ

ತುಳುಭಾಷೆಯನ್ನು ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡಬೇಕು ಎಂದು ಸಚಿವ ಎಸ್‌. ಅಂಗಾರ ಆಗ್ರಹಿಸಿದ್ದಾರೆ. ತುಳು‌ಲಿಪಿಯನ್ನು ಉಳಿಸಬೇಕೆಂಬ ಕಾರಣಕ್ಕೆ ತುಳುವಿಗೆ ರಾಜ್ಯಭಾಷೆಯ ಮಾನ್ಯತೆ ನೀಡುವಂತೆ ಕೋರಿದ್ದಾರೆ.

Vijaya Karnataka Web 24 Feb 2021, 8:41 pm

ಹೈಲೈಟ್ಸ್‌:

  • ತುಳುಭಾಷೆಯನ್ನು ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸುವಂತೆ ಎಸ್‌. ಅಂಗಾರ ಆಗ್ರಹ
  • ತುಳುವಿಗೆ ರಾಜ್ಯಭಾಷೆಯ ಮಾನ್ಯತೆ ನೀಡುವಂತೆ ಮನವಿ
  • ತುಳುವನ್ನ ಐಚ್ಛಿಕ ಭಾಷೆಯಾಗಿ ಕಲಿಸಲು ಅವಕಾಶಕ್ಕೆ ಕೋರಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಬೆಂಗಳೂರು: ತುಳುಭಾಷೆಯನ್ನು ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡಬೇಕು ಎಂದು ಸಚಿವ ಎಸ್‌. ಅಂಗಾರ ಆಗ್ರಹ ಮಾಡಿದ್ದಾರೆ.
ನಾವು ಪ್ರತ್ಯೇಕ ರಾಜ್ಯದ ಬೇಡಿಕೆ ಇಡುತ್ತಿಲ್ಲ. ಆದರೆ 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡಿದರೆ ಅದರದ್ದೇ ಆದ ಗೌರವ ಬರುತ್ತದೆ. ತುಳು‌ಲಿಪಿಯನ್ನು ಉಳಿಸಬೇಕೆಂಬ ಕಾರಣಕ್ಕೆ ತುಳುವಿಗೆ ರಾಜ್ಯಭಾಷೆಯ ಮಾನ್ಯತೆ ಕೇಳುತ್ತಿದ್ದೇವೆ‌. ಇದರಿಂದ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತುಳುವನ್ನ ಐಚ್ಛಿಕ ಭಾಷೆಯಾಗಿ ಕಲಿಸಲು ಸಾಧ್ಯವಾಗುತ್ತದೆ ಎಂದು ಎಸ್‌. ಅಂಗಾರ ಅವರು ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತುಳು ರಾಜ್ಯ ಬೇಡ, ತುಳುವನ್ನು ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಿ: ದಯಾನಂದ ಕತ್ತಲ್‌ಸಾರ್

ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕಾತಲ್ಸರ್ ತುಳುವನ್ನು ಸಂವಿಧಾನದ ಎಂಟನೆ ಪರಿಚ್ಛೇದಕ್ಕೆ ಸೇರಿಸಿ ರಾಜ್ಯಭಾಷೆಯ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿದರು.

ಇದುವರೆಗೆ ಕೇಂದ್ರಕ್ಕೆ ಐದಕ್ಕೂ ಹೆಚ್ಚು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಬೇಡಿಕೆ ಈಡೇರಿಲ್ಲ‌. ನಮಗೆ ತುಳು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ.ಆದರೆ ತುಳುವಿಗೆ ರಾಜ್ಯ ಭಾಷೆಯ ಮಾನ್ಯತೆ ಕೇಳುತ್ತಿದ್ದೇವೆ ಎಂದರು.

‌ ತುಳುವಿನಲ್ಲಿ ಗಣರಾಜ್ಯೋತ್ಸವ ಸಂದೇಶದ ವಿಡಿಯೋ ಮಾಡಿ ಮಂಗಳೂರು ಪೊಲೀಸ್‌ ಕಮಿಷನರ್ ಟ್ವೀಟ್‌!

ತುಳು ಭಾಷೆಯನ್ನು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಮಾತನಾಡುತ್ತಾರೆ. ತುಳು ಭಾಷೆಯನ್ನು ದಕ್ಷಿಣ ಭಾರತದ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ