ಆ್ಯಪ್ನಗರ

ಯಾವುದೇ ಸಂದರ್ಭದಲ್ಲೂ ಚುನಾವಣಾ ದಿನಾಂಕ ಘೋಷಣೆ: ಮುಖ್ಯ ಚುನಾವಣಾಧಿಕಾರಿ

ಯಾವುದೇ ಸಂದರ್ಭದಲ್ಲೂ ಚುನಾವಣಾ ದಿನಾಂಕ ಘೋಷಣೆಯಾಗುವ ಸಂಭವವಿದ್ದು, ಎಲ್ಲಾ ಜಿಲ್ಲೆಗಳು ಸಂಪೂರ್ಣವಾಗಿ ಸಿದ್ದಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Vijaya Karnataka Web 24 Mar 2018, 9:25 pm
ಹಾಸನ: ಯಾವುದೇ ಸಂದರ್ಭದಲ್ಲೂ ಚುನಾವಣಾ ದಿನಾಂಕ ಘೋಷಣೆಯಾಗುವ ಸಂಭವವಿದ್ದು, ಎಲ್ಲಾ ಜಿಲ್ಲೆಗಳು ಸಂಪೂರ್ಣವಾಗಿ ಸಿದ್ದಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web election-01


ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್‍ರೊಂದಿಗೆ ವೀಡಿಯೋ ಸಂವಾದ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ಜಿಲ್ಲಾವಾರು ಈವರೆಗೆ ಆಗಿರುವ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದರು.

ಭಾವಚಿತ್ರ ಇರುವ ಮತದಾರರ ಗುರುತಿನ ಚೀಟಿ ವಿತರಣೆ ತುರ್ತಾಗಿ ಮುಗಿಯಬೇಕು. ಯಾವ ಜಿಲ್ಲೆಯಲ್ಲಿ ಹಾಲೋಗ್ರಾಂಗಳ ಕೊರತೆ ಇದೆ ಅವರು ತಕ್ಷಣ ಚುನಾವಣಾ ಆಯೋಗದಿಂದ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಅವರು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಮೂಲಭೂತ ಸೌಕಾರ್ಯ ಇರಬೇಕು ಕುಡಿಯುವ ನೀರು, ರ್ಯಾಂಪ್, ಶೌಚಾಲಯ, ಬೆಳಕಿನ ವ್ಯವಸ್ಥೆ ಸರಿಯಾಗಿ ಇರುವುದನ್ನು ಖಾತರಿಪಡಿಸಿಕೊಳ್ಳಿ ಎಂದು ಅವರು ಹೇಳಿದರು.

ವಿದ್ಯುನ್ಮಾನ ಮತಯಂತ್ರಗಳ, ವಿ.ವಿ ಪ್ಯಾಟ್‍ಗಳ ಮೊದಲ ಹಂತದ ತಪಾಸಣೆ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ಎಲ್ಲಾ ಜನಪ್ರತಿನಿಧಿಗಳ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಕೊಡುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಸಂಜೀವ್ ಕುಮಾರ್ ಅವರು ಹೇಳಿದರು.

ಚುನಾವಣಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳ ವರ್ಗಾವಣೆ, ನಿಯೋಜನೆ ವಿಚಾರದ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು ಯಾವ ಯಾವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆಯೋ ಆ ಅಧಿಕಾರಿಗಳು ಬೇಗ ಆ ಜಿಲ್ಲೆಯ ಕರ್ತವ್ಯದಿಂದ ಬಿಡುಗಡೆ ಹೊಂದಿ ನಿಯೋಜನೆಗೊಂಡ ಜಾಗಕ್ಕೆ ವರದಿಮಾಡಿಕೊಳ್ಳಬೇಕು, ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾದಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ವಾಹಣಾಧಿಕಾರಿಗಳು ಬೇಗನೆ ಬಿಡುಗಡೆಗೊಳಿಸಬೇಕು ಎಂದು ಅವರು ಹೇಳಿದರು.

ಟ್ಯಾಬ್ಲೇಷನ್, ಮಸ್ಟರಿಂಗ್, ಡಿಮಸ್ಟರಿಂಗ್ ಮತ ಎಣಿಕೆ ಕೇಂದ್ರಗಳು, ಚುನಾವಣಾ ಕರ್ತವ್ಯಕ್ಕೆ ಅಗತ್ಯವಿರುವ ಸಿಬ್ಬಂದಿ ಲಭ್ಯತೆಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿಯವರು ಮಾಹಿತಿ ಪಡೆದರು. ಚುನಾವಣಾ ಮಾಹಿತಿ ಹಂಚಿಕೆ ವಿನಿಮಯಕ್ಕೆ ರೂಪುಗೊಂಡಿರುವ ಸಂವಹನ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು.
ವಿದ್ಯುನ್ಮಾನ ಮತಯಂತ್ರಗಳ, ವಿ.ವಿ ಪ್ಯಾಟ್‍ಗಳ ಬಗ್ಗೆ ಚುನಾವಣಾ ಆಯೋಗ ಸಿದ್ದಪಡಿಸಿರುವ ಮಾಹಿತಿ ವಿಡಿಯೋಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕರೊಂದಿಗೆ ಹಂಚಿಕೆ ಮಾಡಿ ಎಂದು ಅವರು ಸೂಚಿಸಿದರು.

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಉಜ್ವಲ್ ಕುಮಾರ್ ಗೋಷ್ ಅವರು ಸಹ ಅಧಿಕಾರಿಗಳ ನಿಯೋಜನೆ, ವರ್ಗಾವಣೆ ಕುರಿತು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ:ಜಗದೀಶ್, ಜಂಟಿ ಮುಖ್ಯ ಚುನಾವಣಾಧಿಕಾರಿಗಳಾದ ಕೆ.ಎಂ.ರಮೇಶ್, ಮತ್ತು ಸೂರ್ಯ ಸೇನ್, ಉಪ ಮುಖ್ಯ ಚುನಾವಣಾಧಿಕಾರಿಗಳಾದ ಜ್ಞಾನೇಶ್, ಪ್ರಣೇಶ್ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಹಾಸನ ಜಿಲ್ಲೆಯ ಸಿದ್ದತೆಗಳ ಚುನಾವಣಾಧಿಕಾರಿಗಳು, ಸಹಾಯ ಚುನಾವಣಾಧಿಕಾರಿಗಳ ಸ್ಥಿತಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಜಾನಕಿ, ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ವಿವಿಧ ತಾಲ್ಲೂಕು ತಹಸೀಲ್ದಾರ್‍ಗಳು ವೀಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ