ಆ್ಯಪ್ನಗರ

ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

Vijaya Karnataka 11 May 2018, 9:24 am
ಬೆಂಗಳೂರು: ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
Vijaya Karnataka Web students


2017-18ರಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು 2ನೇ ಪಿಯುಸಿಯಲ್ಲಿ ಶೇ.95ರಷ್ಟು ಹಾಗೂ ಅದಕ್ಕೂ ಹೆಚ್ಚು ಅಂಕ (ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿಯಲ್ಲಿ ಶೇ. 5ರಷ್ಟು ರಿಯಾಯಿತಿ ಅಂಕ)ಪಡೆದು ಉತ್ತೀರ್ಣರಾದ ಹಾಗೂ ವೈದ್ಯಕೀಯ, ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣದಲ್ಲಿ ಅಂಗೀಕೃತ ವಿವಿಗಳಿಂದ ಚಿನ್ನದ ಪದಕ ಅಥವಾ ರಾರ‍ಯಂಕ್‌ ಪಡೆದ ವೀರಶೈವ /ಲಿಂಗಾಯತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಅಭಿನಂದಿಸಲಿದೆ.

ಚಿನ್ನದ ಪದಕ ಪಡೆದಿರುವ ವೀರಶೈವ/ಲಿಂಗಾಯತ ಅಭ್ಯರ್ಥಿಗಳು ಮೂಲ ಅಂಕಪಟ್ಟಿಯ ಜೆರಾಕ್ಸ್‌ ಪ್ರತಿಯೊಂದಿಗೆ ಚಿನ್ನದ ಪದಕ ಪಡೆದ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರ ಹಾಗೂ ಹೆಸರು, ತಂದೆ ಹೆಸರು, ಪೂರ್ಣ ಅಂಚೆ ವಿಳಾಸ ನಮೂದಿಸಿ ಭಾವಚಿತ್ರದೊಂದಿಗೆ ಜು. 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು www.kvvsbangalore.orgನಲ್ಲಿ ಪಡೆಯಬಹುದಾಗಿದೆ.

ವಿಳಾಸ: ಗೌರವ ಕಾರ್ಯದರ್ಶಿ, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ, ಕಲ್ಯಾಣ ಸಮುಚ್ಛಯ, 2ನೇ ಮಹಡಿ, ನಂ.18/1, 5ನೇ ಮುಖ್ಯ ರಸ್ತೆ, 6ನೇ ಅಡ್ಡರಸ್ತೆ, ಗಾಂಧಿನಗರ, ಬೆಂಗಳೂರು- 560009. ದೂ. 080-22266416

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ