ಆ್ಯಪ್ನಗರ

ಇಂದು ಹೈಕೋರ್ಟ್‌ನ ಐವರು ಹೊಸ ನ್ಯಾಯಮೂರ್ತಿಗಳ ಪ್ರಮಾಣವಚನ

ರಾಜ್ಯ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ನಡೆಯಲಿದೆ...

Vijaya Karnataka 3 Nov 2018, 5:00 am
ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ನಡೆಯಲಿದೆ.
Vijaya Karnataka Web highcourt


ರಾಜಭವನದ ಗಾಜಿನಮನೆಯಲ್ಲಿನ ಸಮಾರಂಭದಲ್ಲಿ ರಾಜ್ಯಪಾಲರು ನೂತನ ಜಜ್‌ಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋದಿಸುವರು.

ಸೇವಾ ಹಿರಿತನದ ಮೇಲೆ ಜಿಲ್ಲಾ ನ್ಯಾಯಾಧೀಶರಾಗಿದ್ದ ಅಶೋಕ್‌ ಜಿ. ನಿಜಗಣ್ಣನವರ್‌, ಹೆತ್ತೂರು ಪುಟ್ಟಸ್ವಾಮಿಗೌಡ ಸಂದೇಶ್‌, ಕೃಷ್ಣನ್‌ ನಟರಾಜನ್‌, ಪ್ರಹ್ಲಾದ್‌ರಾವ್‌ ಗೋವಿಂದರಾವ್‌ ಮುತಾಲಿಕ್‌ ಪಾಟೀಲ್‌, ಅಪ್ಪಾ ಸಾಹೇಬ್‌ ಶಾಂತಪ್ಪ ಬೆಳ್ಳುಂಕೆ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.

ನ್ಯಾ.ಹುಲುವಾಡಿ ಜಿ. ರಮೇಶ್‌ ಮಧ್ಯಪ್ರದೇಶಕ್ಕೆ
ಹಾಲಿ ಮದ್ರಾಸ್‌ ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯಮೂರ್ತಿಯಾಗಿರುವ ಕರ್ನಾಟಕದವರೇ ಆದ ನ್ಯಾ.ಹುಲುವಾಡಿ ಜಿ.ರಮೇಶ್‌ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂಕೋರ್ಟ್‌ ಕೊಲಿಜಿಯಂ ತೀರ್ಮಾನಿಸಿದೆ.
ಸಿಜೆಐ ರಂಜನ್‌ ಗೊಗೊಯ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಅ.29ರಂದು ನ್ಯಾ.ರಮೇಶ್‌ ಅವರನ್ನು ಮದ್ರಾಸ್‌ನಿಂದ ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಣಯಿಸಿತ್ತು. ಆದರೆ ತಮ್ಮನ್ನು ಮದ್ರಾಸ್‌ ಹೈಕೋರ್ಟ್‌ನಲ್ಲೇ ಉಳಿಸಿ, ಇಲ್ಲವೇ ಬೇರೆ ಹೈಕೋರ್ಟ್‌ಗಳಿಗೆ ಸಿಜೆ ಸ್ಥಾನಕ್ಕೆ ಪರಿಗಣಿಸಿ ಎಂದು ಹುಲುವಾಡಿ ರಮೇಶ್‌ ನ.1ರಂದು ಮನವಿ ಸಲ್ಲಿಸಿದ್ದರು. ಆ ಬಗ್ಗೆ ಶುಕ್ರವಾರ ಮರು ಪರಿಶೀಲನೆ ನಡೆಸಿದ ಕೊಲಿಜಿಯಂ, ಮೊದಲು ಕೈಗೊಂಡ ತೀರ್ಮಾನದಂತೆ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ನಿರ್ಣಯ ಕೈಗೊಂಡಿದೆ.

ನ್ಯಾ.ಕೊಠಾರಿ ಮದ್ರಾಸ್‌ ಹೈಕೋರ್ಟ್‌ಗೆ
ಈ ಮಧ್ಯೆ, ಕರ್ನಾಟಕ ಹೈಕೋರ್ಟ್‌ನಲ್ಲಿ ಹಾಲಿ ಹಿರಿಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ.ವಿನೀತ್‌ ಕೊಠಾರಿ ಅವರನ್ನು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡುವ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಕೈಗೊಂಡಿದೆ. ಈ ಕುರಿತು ಅಧಿಕೃತ ಆದೇಶವನ್ನು ಕೇಂದ್ರ ಸರಕಾರ ಹೊರಡಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ