ಆ್ಯಪ್ನಗರ

Basavaraj Horatti: ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಪ್ರಕರಣ: ಹೈಕೋರ್ಟ್‌ಗೆ ತನಿಖಾ ವರದಿ ಸಲ್ಲಿಕೆ

Atrocity Case Against Basavaraj Horatti: ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರೆ ನಾಲ್ವರ ವಿರುದ್ಧ ಹಲ್ಲೆ, ಉದ್ದೇಶ ಪೂರ್ವಕ ಅವಮಾನ, ಜೀವ ಬೆದರಿಕೆ, ಅಕ್ರಮವಾಗಿ ಕೂಡಿ ಹಾಕಿದ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ಜಾತಿ ನಿಂದನೆ ಪ್ರಕರಣ ಸಂಬಂಧ ಎಫ್‌ ಐ ಆರ್‌ ದಾಖಲಾಗಿತ್ತು. ಅದರ ರದ್ದು ಕೋರಿ ಪ್ರಕರಣದ ಐದನೇ ಆರೋಪಿ ಹೊರಟ್ಟಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Edited byದಿಲೀಪ್ ಡಿ. ಆರ್. | Vijaya Karnataka 28 Jun 2022, 12:54 pm

ಹೈಲೈಟ್ಸ್‌:

  • 2022ರ ಜನವರಿ 31 ರಂದು ಅರ್ಜಿ ವಿಚಾರಣೆ ನಡೆಸಿ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್‌
  • ಬಸವರಾಜ ಹೊರಟ್ಟಿ ಅವರು ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ
  • ಎಫ್‌ ಐ ಆರ್‌ನಲ್ಲೂ ಅವರ ವಿರುದ್ಧ ಗಂಭೀರ ಆರೋಪಗಳಿಲ್ಲ ಎಂದಿದ್ದ ಕೋರ್ಟ್
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Horatti
ಬೆಂಗಳೂರು: ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಪ್ರಕರಣದ ಸಂಬಂಧ ಪೊಲೀಸರು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.
ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಎಫ್‌ ಐ ಆರ್‌ ರದ್ದು ಕೋರಿ ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ! ಮಂಗಳವಾರ ಬಿಜೆಪಿಗೆ ಸೇರ್ಪಡೆ
ಆ ವೇಳೆ ಸರಕಾರಿ ವಕೀಲರು, ಧಾರವಾಡ ಗಾಮೀಣ ಠಾಣಾ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ನೀಡಿದ ತನಿಖಾ ವರದಿಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಲಾಗಿದೆ ಎಂದರು.

ಆ ಅಂಶವನ್ನು ದಾಖಲಿಸಿಕೊಂಡ ನ್ಯಾಯ ಪೀಠ, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿ, ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧದ ವಿಚಾರಣೆ / ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆ ಮುಂದುವರಿಸುವುದಾಗಿ ಆದೇಶಿಸಿತು.


ಪರಿಶಿಷ್ಟ ಪಂಗಡದ ವಾಲ್ಮೀಕಿ ಜನಾಂಗಕ್ಕೆ ಸೇರಿದ ಮೋಹನ್‌ ಚಂಬಪ್ಪ ಗುಂಡಿ ಸಲ್ಮಾನಿ 2022ರ ಜನವರಿ 25 ರಂದು ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿ 'ಮುಗದಾ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆ ಪ್ರೌಢ ಶಾಲೆಗೆ ಹೋಗಿದ್ದೆ. ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಯಾವುದೇ ಅಧಿಕಾರ ಹೊಂದಿಲ್ಲ. ಆದ ಕಾರಣ ಸಂಸ್ಥೆಯಲ್ಲಿ ಅಳವಡಿಸಿರುವ ಅವರ ನಾಮ ಫಲಕ ತೆಗೆಯಬೇಕು ಎಂದು ಶಾಲಾ ಸಿಬ್ಬಂದಿಗೆ ವಿನಂತಿಸಿಕೊಂಡಿದ್ದೆ. ಈ ವೇಳೆ ಮೊದಲ ನಾಲ್ಕು ಆರೋಪಿಗಳಾದ ವೆಂಕಟೇಶ ಲಕ್ಸಾಣಿ, ಚೈತ್ರ ಮೇಟಿ, ನಿರ್ಮಲಾ ಚವ್ಹಾಣ ಮತ್ತು ದೊಡ್ಡಪ್ಪ ಕೆಂಗಪ್ಪ ಅವರು ಸಿಟ್ಟಾಗಿ, ಬಸವರಾಜ ಹೊರಟ್ಟಿ ಅವರ ಪ್ರಚೋದನೆ ಮೇರೆಗೆ ನನ್ನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದರು. ಕೊಠಡಿಯಲ್ಲಿ ಅಕ್ರಮವಾಗಿ ಕೂಡಿ ಹಾಕಿ, ನನ್ನ ಕಾರಿನ ಮೇಲೆ ಕಲ್ಲು ತೂರಿ ಹಾನಿಗೊಳಿಸಿದರು' ಎಂದು ಆರೋಪಿಸಿದ್ದರು.

ಸಭಾಪತಿ ಬಸವರಾಜ ಹೊರಟ್ಟಿ ಮುಂದಿನ ನಡೆ ಏನು? ಪಕ್ಷೇತರವೋ, ಬಿಜೆಪಿಯೋ!
ಇದರಿಂದ ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರೆ ನಾಲ್ವರ ವಿರುದ್ಧ ಹಲ್ಲೆ, ಉದ್ದೇಶ ಪೂರ್ವಕ ಅವಮಾನ, ಜೀವ ಬೆದರಿಕೆ, ಅಕ್ರಮವಾಗಿ ಕೂಡಿ ಹಾಕಿದ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ಜಾತಿ ನಿಂದನೆ ಪ್ರಕರಣ ಸಂಬಂಧ ಎಫ್‌ ಐ ಆರ್‌ ದಾಖಲಿಸಿದ್ದರು. ಅದರ ರದ್ದು ಕೋರಿ ಪ್ರಕರಣದ ಐದನೇ ಆರೋಪಿ ಹೊರಟ್ಟಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

2022ರ ಜನವರಿ 31 ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬಸವರಾಜ ಹೊರಟ್ಟಿ ಅವರು ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ. ಎಫ್‌ ಐ ಆರ್‌ನಲ್ಲೂ ಅವರ ವಿರುದ್ಧ ಗಂಭೀರ ಆರೋಪಗಳಿಲ್ಲ ಎಂದು ತಿಳಿಸಿ ಅವರ ವಿರುದ್ಧದ ವಿಚಾರಣೆ / ತನಿಖೆಗೆ ಮಧ್ಯಂತರ ತಡೆ ನೀಡಿತ್ತು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ