ಆ್ಯಪ್ನಗರ

ಅಯೋಧ್ಯೆ ಮಹಾ ತೀರ್ಪು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಸ್ಥಿತಿಯಲ್ಲಿದೆ- ಬೊಮ್ಮಾಯಿ

ಅಯೋಧ್ಯೆ ಐತಿಹಾಸಿಕ ತೀರ್ಪು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು ಯಾವುದೇ ಅಹಿತಕರ ಘಟನೆ ಎಲ್ಲೂ ವರದಿಯಾಗಿಲ್ಲ. ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

Vijaya Karnataka Web 9 Nov 2019, 2:48 pm
ಬೆಂಗಳೂರು: ಅಯೋಧ್ಯೆ ಮಹಾ ತೀರ್ಪು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೀರ್ಪಿನ ಹಿನ್ನೆಲೆಯಲ್ಲಿ ಯಾರೂ ವಿಜಯೋತ್ಸವ ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.
Vijaya Karnataka Web ayodhya land dispute case judgment pace in karnataka
ಅಯೋಧ್ಯೆ ಮಹಾ ತೀರ್ಪು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಸ್ಥಿತಿಯಲ್ಲಿದೆ- ಬೊಮ್ಮಾಯಿ


ಅಯೋಧ್ಯೆ ಮಹಾ ತೀರ್ಪು: ಸುಪ್ರೀಂ ಕೋರ್ಟ್ ಆದೇಶದ ಪಿನ್ ಟು ಪಿನ್ ಮಾಹಿತಿ ಹೀಗಿದೆ

ಅಯೋಧ್ಯೆ ತೀರ್ಪು ಎಲ್ಲರಿಗೂ ಒಪ್ಪಿತವಾದ ತೀರ್ಪು ಆಗಿದೆ. ಇದೊಂದು ಐತಿಹಾಸಿಕ ಆದೇಶವಾಗಿದೆ ಎಂದ ಅವರು ಸದ್ಯ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಚೆನ್ನಾಗಿದೆ. ಇದೇ ರೀತಿ ಶಾಂತಿ ಸೌಹಾರ್ದತೆಯನ್ನು ಜನರು ಕಾಪಾಡಿಕೊಂಡು ಬರಬೇಕು ಅಂತ ಮನವಿ ಮಾಡಿದ್ದಾರೆ.

ಏನೇ ಸಮಸ್ಯೆ ಇದ್ದರೆ ಸ್ಥಳೀಯ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರಿಂದಲೂ ಆಗಬಾರದು ಎಂದ ಅವರು ಕೇಂದ್ರದ ಸೂಚನೆಯಂತೆ ಯಾರು ವಿಜಯೋತ್ಸವ ಆಚರಣೆ ಮಾಡಬಾರದು ಎಂದರು.

ವಿವಾದಿತ ಜಾಗ ರಾಮ್‌ಲಲ್ಲಾ ಪಾಲು, ಸುನ್ನಿ ವರ್ಕ್‌ ಬೋರ್ಡ್‌ಗೂ ಐದು ಎಕರೆ ಜಾಗ

ಬೆಂಗಳೂರಿನಲ್ಲಿ ನಿಷೇಧಾಜ್ಞೆ ವಾಪಸ್ ಪಡೆಯುವ ಕುರಿತಾಗಿ ಇಂದು ಸಂಜೆ ಅಧಿಕಾರಿಗಳ ಜತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಗೃಹ ಸಚಿವರು ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇಡಲಾಗಿದೆ. ತೀರ್ಪಿನ ಹಿನ್ನೆಲೆ ಕೆಲ ಸಂಘಟನೆಗಳು ಪ್ರಚೋದನೆ ಮಾಡುವ ಸಾಧ್ಯತೆ ಕೂಡಾ ಇರುವುದರಿಂದ ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ತೀರ್ಪು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದ್ದು ಸಿಆರ್‌ಪಿಎಫ್ ಹಾಗೂ ಕ್ಷಿಪ್ರ ಕಾರ್ಯಪಡೆಯನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಬೆಂಗಳೂರು ನಗರಾದ್ಯಂತ ಬಂದೋಬಸ್ಥ್ ಮಾಡಲಾಗಿದ್ದು ನಿಷೇಧಾಜ್ಞೆ ಜಾರಿಯಲ್ಲಿದೆ.


ರಾಜ್ಯದ ಅತ್ಯಂತ ಕೋಮು ಸೂಕ್ಷ್ಮ ಪ್ರದೇಶವಾದ ಮಂಗಳೂರಿನಲ್ಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ