ಆ್ಯಪ್ನಗರ

ಬಂಡಿಪುರದಲ್ಲಿ ಎಲೆವೇಟೆಡ್‌ ರಸ್ತೆ: ಪ್ರತಿಕ್ರಿಯೆಗೆ ಸುಪ್ರೀಂಕೋರ್ಟ್ ಸೂಚನೆ

ಬಂಡಿಪುರ ಅಭಯಾರಣ್ಯದಲ್ಲಿ ಎಲೆವೇಟೆಡ್‌ ಕಾರಿಡಾರ್‌ ನಿರ್ಮಿಸುವ ಭೂಸಾರಿಗೆ ಇಲಾಖೆಯ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಸರಕಾರಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

Vijaya Karnataka 13 Oct 2018, 9:53 am
ಹೊಸದಿಲ್ಲಿ: ಬಂಡಿಪುರ ಅಭಯಾರಣ್ಯದಲ್ಲಿ ಎಲೆವೇಟೆಡ್‌ ಕಾರಿಡಾರ್‌ ನಿರ್ಮಿಸುವ ಭೂಸಾರಿಗೆ ಇಲಾಖೆಯ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಸರಕಾರಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.
Vijaya Karnataka Web Supreme Court


ನ್ಯಾಯಮೂರ್ತಿಗಳಾದ ರೋಹಿಂಗ್ಟನ್‌ ನಾರಿಮನ್‌ ಮತ್ತು ನವೀನ್‌ ಸಿನ್ಹಾ ನೇತೃತ್ವದ ದ್ವಿಸದಸ್ಯ ಪೀಠ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು.

ಕೇರಳದಲ್ಲಿ ಭಾರಿ ಮಳೆ, ಪ್ರವಾಹ ಉಂಟಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಂಡಿಪುರ ಅರಣ್ಯದ ರಾಷ್ಟ್ರೀಯ ಹೆದ್ದಾರಿ 212ರಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ಅನುಮತಿ ನೀಡಬೇಕು ಎಂದು ಕೇಳಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ ಕರ್ನಾಟಕ, ಕೇರಳ, ತಮಿಳುನಾಡು ಸರಕಾರಗಳ ಪ್ರತಿನಿಧಿಗಳು, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ‍್ಯದರ್ಶಿ ಹಾಗೂ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಯನ್ನೊಳಗೊಂಡ ಸಮಿತಿಯು ಕೇರಳದ ಈ ಬೇಡಿಕೆಯ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಬೇಕೆಂದು ಸೂಚಿಸಿತ್ತು.

ಈ ಕುರಿತು ವರದಿ ನೀಡಿರುವ ಸಮಿತಿಯು ಬಂಡಿಪುರ ಅರಣ್ಯದಲ್ಲಿ ಎಲೆವೇಟೆಡ್‌ ಕಾರಿಡಾರ್‌ ನಿರ್ಮಿಸಿ ವಾಹನ ಸಂಚಾರಕ್ಕೆ ಅನುಮತಿ ನೀಡಬಹುದು ಎಂದು ಹೇಳಿದ್ದು, ಕರ್ನಾಟಕ ಈ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದೆ. ಈ ಪ್ರಕರಣದ ಕುರಿತು ಹಲವು ಮಧ್ಯಂತರ ಅರ್ಜಿಗಳೂ ದಾಖಲಾಗಿವೆ.

ಬಂಡಿಪುರದಲ್ಲಿ ಕಾರಿಡಾರ್‌ ನಿರ್ಮಾಣ ಇಲ್ಲ : ಶಂಕರ್‌
ಬೆಂಗಳೂರು :
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಎಲಿವೇಟೆಡ್‌ ಕಾರಿಡಾರ್‌ ನಿರ್ಮಿಸಲು ರಾಜ್ಯ ಸರಕಾರ ಸಮ್ಮತಿ ನೀಡಿಲ್ಲ ಎಂದು ಅರಣ್ಯ ಸಚಿವ ಆರ್‌. ಶಂಕರ್‌ ಸ್ಪಷ್ಟಪಡಿಸಿದ್ದಾರೆ.

ಬಂಡೀಪುರದಲ್ಲಿ ಉದ್ದೇಶಿತ ಕಾರಿಡಾರ್‌ ನಿರ್ಮಾಣಕ್ಕೆ ಅನುಮತಿ ನೀಡಬಾರದೆಂದು ಒತ್ತಾಯಿಸಿ ಮಾಜಿ ಶಾಸಕ ವಾಟಾಳ್‌ ನಾಗರಾಜ್‌ ಅವರು ಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಇದಾದ ಬಳಿಕ ಮಾತನಾಡಿದ ಶಂಕರ್‌, ''ಬಂಡೀಪುರದಲ್ಲಿ ಕಾರಿಡಾರ್‌ ನಿರ್ಮಾಣವಿಲ್ಲ . ಸುಪ್ರೀಂಕೋರ್ಟ್‌ನಲ್ಲೂ ರಾಜ್ಯ ಸರಕಾರ ಇದೇ ವಾದ ಮಂಡಿಸಲಿದೆ. ಕಾರಿಡಾರ್‌ ಸಂಬಂಧ ಸಚಿವ ರೇವಣ್ಣ ಹೇಳಿಕೆ ನೀಡಿರುವುದಯ ಅವರ ವೈಯಕ್ತಿಕ ಅಭಿಪ್ರಾಯ,''ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ