ಆ್ಯಪ್ನಗರ

ಆತ್ಮಹತ್ಯೆಗೆ ಶರಣಾದ ರೈತ ಮಕ್ಕಳ ಶೈಕ್ಷಣಿಕ ಶುಲ್ಕ ಮನ್ನಾ

ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳ ಶೈಕ್ಷಣಿಕ ಶುಲ್ಕ ಮನ್ನಾ ಮಾಡುವ ಮಹತ್ವದ ನಿರ್ಧಾರವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರಕಟಿಸಿದೆ.

Vijaya Karnataka 1 Oct 2018, 7:28 am
ಬೆಂಗಳೂರು: ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳ ಶೈಕ್ಷಣಿಕ ಶುಲ್ಕ ಮನ್ನಾ ಮಾಡುವ ಮಹತ್ವದ ನಿರ್ಧಾರವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರಕಟಿಸಿದೆ.
Vijaya Karnataka Web school


ವಿವಿಯ ನಾನಾ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು ಐವರು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ. ಇಂಥ ತೀರ್ಮಾನವನ್ನು ವಿವಿಯ ವ್ಯವಸ್ಥಾಪನಾ ಮಂಡಳಿ ಸಭೆ ಕೈಗೊಂಡಿದೆ.

ಶುಲ್ಕ ಮನ್ನಾ ಸೌಲಭ್ಯ ಪಡೆಯುವ ಅಭ್ಯರ್ಥಿ ಹಾಗೂ ಅವರ ಪೋಷಕರು ಕರ್ನಾಟಕದವರಾಗಿರಬೇಕು. ಅಭ್ಯರ್ಥಿ ಸಿಇಟಿ ಪರೀಕ್ಷೆಯಲ್ಲಿ ಮೆರಿಟ್‌ನಡಿ ಸೀಟು ಪಡೆದಿರಬೇಕು. ಪೋಷಕರ ಆದಾಯ ಕೃಷಿ ಮೂಲವಾಗಿದ್ದು, ಸರಕಾರದಿಂದ ದೃಢೀಕರಿಸಬೇಕು. ಯಾವುದೇ ರೈತರು ಆತ್ಮಹತ್ಯೆಗೆ ಶರಣಾಗಿದ್ದಲ್ಲಿ ಆ ಕುರಿತು ಸರಕಾರದಿಂದ ದೃಢೀಕರಿಸಿದ ಪ್ರಮಾಣಪತ್ರವನ್ನು ಒದಗಿಸಿದಲ್ಲಿ ಶುಲ್ಕ ಮನ್ನಾಗೆ ವಿದ್ಯಾರ್ಥಿಗಳು ಅರ್ಹತೆ ಪಡೆಯುತ್ತಾರೆ ಎಂದು ವಿವಿ ಕುಲಸಚಿವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ