ಆ್ಯಪ್ನಗರ

ಕನ್ನಡದಲ್ಲೂ ಬ್ಯಾಂಕಿಂಗ್‌ ಪರೀಕ್ಷೆ: ದಿಲ್ಲಿಗೆ ನಿಯೋಗ

ವಿಕ ಸುದ್ದಿಲೋಕ ಬೆಂಗಳೂರು ಬ್ಯಾಂಕಿಂಗ್‌, ಸೆಂಟ್ರಲ್‌ ಎಕ್ಸೈಸ್‌ ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವ ಸಂಬಂಧ ಕೇಂದ್ರದ ...

Vijaya Karnataka 30 Aug 2017, 10:45 am

ಬೆಂಗಳೂರು: ಬ್ಯಾಂಕಿಂಗ್‌, ಸೆಂಟ್ರಲ್‌ ಎಕ್ಸೈಸ್‌ ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸೆ. 6ರಂದು ನಿಯೋಗವನ್ನು ದಿಲ್ಲಿಗೆ ಕರೆದೊಯ್ಯಲಿದೆ.

ಸಾಹಿತಿಗಳಾದ ಎಸ್‌.ಎಲ್‌. ಭೈರಪ್ಪ, ಪ್ರೊ. ಚಂದ್ರಶೇಖರ ಪಾಟೀಲ, ಚಂದ್ರಶೇಖರ ಕಂಬಾರ, ಮರುಳ ಸಿದ್ದಪ್ಪ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್‌, ಹಿರಿಯ ರಂಗಭೂಮಿ ಕಲಾವಿದೆ ಬಿ. ಜಯಶ್ರೀ ಸೇರಿದಂತೆ ಒಟ್ಟು 12 ಮಂದಿ ತಜ್ಞರ ತಂಡ ಈ ನಿಯೋಗದಲ್ಲಿರಲಿದೆ.

ಸೆ. 7 ಮತ್ತು 8ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಅವರನ್ನು ಈ ನಿಯೋಗ ಭೇಟಿ ಮಾಡಲಿದೆ. ರಾಜ್ಯದ ಸಂಸದರನ್ನೂ ಈ ಸಂದರ್ಭದಲ್ಲಿ ಆಹ್ವಾನಿಸಲಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ