ಆ್ಯಪ್ನಗರ

ಎಚ್.ಡಿ ದೇವೇಗೌಡರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ! ಮಾಜಿ ಶಿಷ್ಯನಿಗೆ ಗೌಡ್ರು ಕೊಟ್ಟ ಸಲಹೆ ಏನು?

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ನೂತನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ಬೊಮ್ಮಾಯಿಯವರಿಗೆ ವಿ.ಸೋಮಣ್ಣ ಸಾಥ್ ನೀಡಿದರು. ಇದೇ ವೇಳೆ ಬೊಮ್ಮಾಯಿ ಅವರು ದೇವೇಗೌಡರ ಆಶೀರ್ವಾದ ಪಡೆದರು.

Vijaya Karnataka Web 1 Aug 2021, 3:06 pm
ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ತಮ್ಮ ಹಿಂದಿನ ರಾಜಕೀಯ ಗುರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜನತಾ ಪರಿವಾರದ ಹಿನ್ನಲೆ ಹೊಂದಿರುವ ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಪಕ್ಷದ ವರಿಷ್ಠರ ಭೇಟಿಯ ಜೊತೆಗೆ ತಮ್ಮ ಮಾಜಿ ರಾಜಕೀಯ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
Vijaya Karnataka Web hdd


ಭಾನುವಾರ ಮಾಜಿ ಪ್ರಧಾನಿ ಎಚ್ ಡಿ ಡಿ ಅವರ ನಿವಾಸಕ್ಕೆ ತೆರಳಿ ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ದೇವೇಗೌಡರು ಹಾಗೂ ಎಚ್ ಡಿ ರೇವಣ್ಣ ಅವರು ನೂತನ ಸಿಎಂಗೆ ಶಾಲು ಹೊದಿಸಿ ಸನ್ಮಾನಿಸಿದರು.

ಸಂಪುಟ ರಚನೆ ಸಂಕಷ್ಟ: ದೇವರ ಮೊರೆ ಹೋದ ಕೆ.ಎಸ್ ಈಶ್ವರಪ್ಪ

ಜನತಾ ಪರಿವಾರದ ಹಿನ್ನೆಲೆ ಹೊಂದಿರುವ ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ ಅವರು ಜನತಾ ಪರಿವಾರದ ಹಿನ್ನೆಲೆ ಹೊಂದಿದ್ದಾರೆ. ಜೆಡಿ ಎಸ್ ನಲ್ಲಿದ್ದು ಬಳಿಕ ಅವರು ಬಿಜೆಪಿ ಸೇರ್ಪಡೆಯಾದರು. ಬಿಎಸ್ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಗೃಹ ಸಚಿರಾಗಿದ್ದ ಅವರಿಗೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಿಎಂ ಸ್ಥಾನ ಸಿಕ್ಕಿದೆ. ಬೊಮ್ಮಾಯಿಗೆ ಸಿಎಂ ಸ್ಥಾನ ಸಿಕ್ಕಿದ್ದಕ್ಕಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡಾ ಸಂತಸ ವ್ಯಕ್ತಪಡಿಸಿದ್ದರು. ಇದೀಗ ದೇವೇಗೌಡರನ್ನು ಬೊಮ್ಮಾಯಿ ಅವರು ಭೇಟಿ ಮಾಡುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ