ಆ್ಯಪ್ನಗರ

Winter Session In Belagavi: ಬೆಳಗಾವಿ ಅಧಿವೇಶನಕ್ಕೆ ತಟ್ಟುತ್ತಾ ಗಡಿ ವಿವಾದದ ಬಿಸಿ! ಸರ್ಕಾರದ ಕ್ರಮ ಏನು?

ಡಿಸೆಂಬರ್ 19 ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇದೇ ವೇಳೆ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸೃಷ್ಟಿಯಾಗಿದ್ದು, ಅಧಿವೇಶನಕ್ಕೂ ವಿವಾದದ ಬಿಸಿ ತಟ್ಟುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಡಿಜಿಪಿ ಅಲೋಕ್ ಕುಮಾರ್‌ ಕೂಡ ಒಂದು ಬಾರಿ ಬೆಳಗಾವಿ ರೌಂಡ್ಸ್‌ ಹಾಕಿಕೊಂಡು ಬಂದಿದ್ದಾರೆ.

Edited byಅವಿನಾಶ ವಗರನಾಳ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 30 Nov 2022, 6:41 pm

ಹೈಲೈಟ್ಸ್‌:


  • ಕಳೆದ ಬಾರಿಯಂತೆ ಬೆಳಗಾವಿ ಅಧಿವೇಶನಕ್ಕೆ ತಟ್ಟುತ್ತಾ ಗಡಿ ವಿವಾದದ ಬಿಸಿ
  • ಅಧಿವೇಶನದ ಸಂದರ್ಭದಲ್ಲಿಯೇ ಮುನ್ನೆಲೆಗೆ ಬಂದಿರುವ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ
  • ಕಳೆದ ಬಾರಿಯ ಘಟನೆ ಮರುಕಳಿಸದಂತೆ ಸರ್ಕಾರ ಕೈಗೊಳ್ಳುತ್ತಾ ಮುನ್ನೆಚ್ಚರಿಕೆ ಕ್ರಮ?
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Belagavi suvarna soudha
ಬೆಂಗಳೂರು: ಡಿಸೆಂಬರ್ 19 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಈ ಬಾರಿಯ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಸಿ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳು ಕಂಡುಬರುತ್ತಿವೆ. ಈ ನಿಟ್ಟಿನಲ್ಲಿ ಎಚ್ಚರಿಕೆಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗುತ್ತಿದೆ.
ಕಳೆದ ಬಾರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿತ್ತು. ಆದರೆ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟಿಕೆ ನಡೆಸಿತ್ತು. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಹಾನಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ವಿಚಾರವಾಗಿ ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು.

ಎಂಇಎಸ್ ಪುಂಡರು ರಾಯಣ್ಣ ವಿಗ್ರಹ ವಿರೂಪಗೊಳಿಸಿದ್ದರು. ಖಡ್ಗ ಮತ್ತು ಗುರಾಣಿ ಕಿತ್ತಾಕಿ ಮುಖದ ಮೇಲೆ ಮಸಿಬಳಿಯುವ ಕೆಲಸ ಮಾಡಿದ್ದರು. ಅಧಿವೇಶನದ ಸಂದರ್ಭದಲ್ಲೇ ಈ ಕೃತ್ಯ ಬೆಳಗಾವಿಯಲ್ಲಿ ಉದ್ವಿಗ್ನದ ವಾತಾವರಣ ಸೃಷ್ಟಿ ಮಾಡಿತ್ತು. ಅಷ್ಟೇ ಅಲ್ಲ, ರಾತ್ರೋ ರಾತ್ರಿ ಸರ್ಕಾರಿ ವಾಹನಗಳಿಗೂ ಪುಂಡರು ಹಾನಿ ಉಂಟು ಮಾಡಿದ್ದರು.

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ನಿರ್ಣಯ
ಕಳೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧ ವಿಧಾನ ಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲಾಗಿತ್ತು. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಹಾನಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆದು, ಮೂರು ಪಕ್ಷದ‌ ಸದಸ್ಯರು ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿದ್ದರು. ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕಾರ ಮಾಡಲಾಗಿತ್ತು. ಈ ಮೂಲಕ ಎಂಇಎಸ್‌ಗೆ ಎಚ್ಚರಿಕೆಯ ಸಂದೇಶವನ್ನು ನೀಡಲಾಗಿತ್ತು.

Basavaraj Bommai : ರಾಜ್ಯದ ಬಸ್‌ಗಳಿಗೆ ಹಾನಿ, ಸೂಕ್ತ ಕ್ರಮಕ್ಕೆ ಮಹಾರಾಷ್ಟ್ರದ ಜೊತೆ ಮಾತನಾಡುವಂತೆ ಗೃಹ ಇಲಾಖೆಗೆ ಸೂಚನೆ: ಬಸವರಾಜ ಬೊಮ್ಮಾಯಿ
ಇದೀಗ ಮತ್ತೊಮ್ಮೆ ಗಡಿ ವಿವಾದ ತೀವ್ರಗೊಂಡಿದೆ. ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಹಾನಿ ಉಂಟು ಮಾಡಿದ್ದಾರೆ. ಅಲ್ಲದೆ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಈ ನಡುವೆ ಡಿಸೆಂಬರ್ 19 ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಮತ್ತೊಮ್ಮೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

Karnataka Maharashtra Border Issue : ಗಡಿ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ವಿರುದ್ಧ ಕಟ್ಟೆಚ್ಚರ: ಆರಗ ಜ್ಞಾನೇಂದ್ರ ಸೂಚನೆ
ಅಧಿವೇಶನದ ಹಿನ್ನೆಲೆಯಲ್ಲಿ ಭದ್ರತಾ ಪರಿಶೀಲನೆ
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧೀವೇಶನ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್‌ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಂದೋಬಸ್ತ್ ಕಾರ್ಯಯೋಜನೆ ಪರಿಶೀಲಿಸಿದ್ದಾರೆ. ಸುವರ್ಣಸೌಧಕ್ಕೂ ಭೇಟಿ ನೀಡಿ ಬಂದೋಬಸ್ತ್ ಹಾಗೂ ಸಿಬ್ಬಂದಿಗಳ ತಂಗುದಾಣದ ಸ್ಥಳ ಪರಿಶೀಲನೆ ನಡೆಸಿ ಅಧೀನ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದ್ದಾರೆ.

Karnataka Maharashtra Border Dispute: ಕರ್ನಾಟಕದ ಬಸ್‌ಗೆ ಮಸಿ ಬಳಿದು ಮಹಾರಾಷ್ಟ್ರದಲ್ಲಿ ಪುಂಡಾಟ; ಗಡಿ ವಿವಾದ ವಿಚಾರಣೆ ವೇಳೆ ಉದ್ಧಟತನ
ಅದಲ್ಲದೇ, ಮಹಾರಾಷ್ಟ್ರದಲ್ಲಿನಮ್ಮ ರಾಜ್ಯದ ಪ್ರವಾಸಿಗರು ಹಾಗೂ ವಾಹನಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅಲ್ಲಿನ ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಗಡಿಗೆ ಸಂಬಂಧಿಸಿದಂತೆ ಬಸ್‌ಗಳಿ ಮಸಿ, ಕಲ್ಲುತೂರುವ ಘಟನೆಗಳು ನಡೆದಿದೆ. ಸಾಂಗ್ಲಿಯಲ್ಲಿ ರಾಜ್ಯದ ಬಸ್‌ಗಳಿಗೆ ಕಲ್ಲುತೂರಿರುವುದು ಸೇರಿದಂತೆ ಒಟ್ಟು ಮೂರು ಕಡೆ ಇಂತಹ ಘಟನೆಗಳು ನಡೆದಿವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಗಡಿ ಕುರಿತು ಬುಧವಾರ ಸರ್ವೋಚ್ಚ ನ್ಯಾಯಾಲಯ ವಿಚಾರಣೆ ನಡೆಸುವ ಸಂಭವವಿದ್ದು, ಎಲ್ಲಿಯೂ ಗಲಾಟೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚಿಸಲಾಗಿದೆ’’, ಎಂದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ