ಆ್ಯಪ್ನಗರ

ಎರಡನೇ ರಾಜಧಾನಿಯಾಗಿ ಬೆಳಗಾವಿ 19ಕ್ಕೆ ಘೋಷಣೆಗೆ ಸಾಧ್ಯತೆ

ಡಿಸೆಂಬರ್‌ 19 ರಂದು ಬುಧವಾರ ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ...

Vijaya Karnataka 16 Dec 2018, 5:00 am
ಬೆಂಗಳೂರು : ಡಿಸೆಂಬರ್‌ 19 ರಂದು ಬುಧವಾರ ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸಲು ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
Vijaya Karnataka Web belgum


ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಘೋಷಿಸುವ ಇಂಗಿತವನ್ನು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಈಗಾಗಲೇ ವ್ಯಕ್ತಪಡಿಸಿದ್ದಾರೆ. ಜತೆಗೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಇಲಾಖೆಗಳ ಕಚೇರಿಯನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಡವೂ ಇದೆ. ಈ ಸಂಬಂಧ ಸಂಪುಟ ಉಪ ಸಮಿತಿಯ ವರದಿಯನ್ನೂ ತರಿಸಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಸುವರ್ಣಸೌಧದಲ್ಲಿ ನಡೆಯುವ ಸಂಪುಟ ಸಭೆಗೆ ಹೆಚ್ಚಿನ ಮಹತ್ವವಿದೆ. ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲು ಮೂಲ ಕಾರಣಕರ್ತರೇ ಕುಮಾರಸ್ವಾಮಿ ಆಗಿದ್ದಾರೆ. ಈ ಹಿಂದೆ ಬಿಜೆಪಿಯೊಂದಿಗೆ ಸೇರಿ ಮೈತ್ರಿ ಸರಕಾರದ ನೇತೃತ್ವ ವಹಿಸಿಕೊಂಡಿದ್ದಾಗ ಅವರು, ಬೆಳಗಾವಿ ಅಧಿವೇಶನ ಪ್ರಾರಂಭಿಸಿದ್ದರು. ನಂತರ ಬಿಜೆಪಿ ಸರಕಾರದ ಅವಧಿಯಲ್ಲಿ ಶಾಶ್ವತ ಕಟ್ಟಡ ನಿರ್ಮಿಸಲಾಗಿದೆ. ಇದೀಗ ಬೆಳಗಾವಿಯನ್ನು ಎರಡನೇ ರಾಜಧಾನಿಯೆಂದು ಘೋಷಿಸಿ ತಾವು ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಹೊಂದಿದ್ದಾಗಿ ತೋರ್ಪಡಿಸಿಕೊಳ್ಳಬೇಕು ಎನ್ನುವುದು ಸಿಎಂ ಇರಾದೆಯಾಗಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್‌ ತಟಸ್ಥ ನೀತಿ

ಮಿತ್ರಪಕ್ಷ ಕಾಂಗ್ರೆಸ್‌ನಲ್ಲಿ ಈ ವಿಚಾರದಲ್ಲಿ ಅಷ್ಟೊಂದು ಉತ್ಸಾಹ ಕಾಣುತ್ತಿಲ್ಲ. ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಘೋಷಿಸಿದರೆ ಅದರ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಈ ಪ್ರಸ್ತಾಪವನ್ನು ವಿರೋಧಿಸುವುದೂ ಕಷ್ಟ. ಹಾಗಾಗಿ ತಟಸ್ಥವಾಗಿದ್ದುಕೊಂಡು ಆದಷ್ಟು ಕಾಲ ಈ ಪ್ರಸ್ತಾಪ ಮುಂದೂಡುವಂತೆ ಒತ್ತಡ ತರುವುದು ಕಾಂಗ್ರೆಸ್‌ ಯೋಚನೆಯಾಗಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ