ಆ್ಯಪ್ನಗರ

ಬೆಂಗಳೂರು, ಶಿವಮೊಗ್ಗ, ಬಳ್ಳಾರಿಯಲ್ಲಿ ಕೊರೊನಾ ಲಸಿಕೆ ಕೇಂದ್ರ; ಇಲ್ಲಿಂದಲೆ ವಿತರಣೆ

ರಾಜ್ಯದಲ್ಲಿ 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್‌ ಚೇನ್‌ ಕೇಂದ್ರಗಳು ಲಭ್ಯವಿದೆ ಎಂದು ವೈದ್ಯಕೀಯ ಸಚಿವ ಡಾ ಸುಧಾಕರ್‌ ಮಾಹಿತಿ ನೀಡಿದರು. ಈ ಮೂಲಕ ಕೊರೊನಾ ಲಸಿಕೆ ವಿತರಣೆಗೆ ಇನ್ನು ಒಂದೇ ಹೆಜ್ಜೆ ಬಾಕಿ ಇದೆ ಎನ್ನುವ ಗುಟ್ಟು ಬಿಚ್ಚಿಟ್ಟರು.

Vijaya Karnataka Web 3 Dec 2020, 7:07 am
ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದ್ದು, ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು. ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್‌ ಬಯೋಟೆಕ್‌ ಸಹಯೋಗದಲ್ಲಿ ಕೊವ್ಯಾಕ್ಸಿನ್‌ ಕೋವಿಡ್‌ ಲಸಿಕೆಯ 3 ನೇ ಹಂತದ ಕ್ಲಿನಿಕಲ್‌ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಚಾಲನೆ ನೀಡಿದರು.
Vijaya Karnataka Web Corona Vaccine
Representative image


ಆನಂತರ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್‌, ರಾಜ್ಯದಲ್ಲಿ 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್‌ ಚೇನ್‌ ಕೇಂದ್ರಗಳು ಲಭ್ಯವಿವೆ'' ಎಂದು ಹೇಳಿದರು. 'ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ.

ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ'' ಎಂದರು. ಪ್ರಪಂಚದಲ್ಲಿ ಶೇ.15 ರಿಂದ ಶೇ.20 ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿವೆ. ಲಸಿಕೆಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ, ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಆದ್ದರಿಂದ ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ'' ಎಂದು ಸ್ಪಷ್ಟಪಡಿಸಿದರು.

ಕಟೀಲ್‌ಗೆ ನಡ್ಡಾ ಕರೆ, ಶಾಸಕರು, ಮುಖಂಡರ ವಾಚಾಳಿತನಕ್ಕೆ ಬ್ರೇಕ್‌ ಹಾಕಲು ಸೂಚನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ