ಆ್ಯಪ್ನಗರ

ಕರ್ನಾಟಕ ಬಂದ್‌ ಎಫೆಕ್ಟ್‌: ಬೆಂಗಳೂರಿನ 100ಕ್ಕೂ ಹೆಚ್ಚು ರೌಡಿಶೀಟರ್‌ಗಳು ಪೊಲೀಸ್‌ ವಶಕ್ಕೆ!

ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಇರುವ ಹಿನ್ನೆಲೆ ನೂರಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬೆಂಗಳೂರು ಪಶ್ಚಿಮ ಡಿಸಿಪಿ ಮಾಹಿತಿ ನೀಡಿದರು. ಇನ್ನೊಂದೆಡೆ ಬೆಂಗಳೂರಿನ ಶಿವಾಜಿನಗರದಲ್ಲಿ ಜನ ಜೀವನ ದಿನ ನಿತ್ಯದಂತೆ ಇದೆ. ಅಂಗಡಿ ಮುಂಗಟ್ಟುಗಳು ತೆರೆದಿದೆ.

Vijaya Karnataka Web 5 Dec 2020, 8:36 am
ಬೆಂಗಳೂರು: ಮರಾಠ ನಿಗಮ ಮಂಡಳಿ ರಚನೆ ವಿರೋಧಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ರಾಜ್ಯದ ಹಲವೆಡೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ, ಕೆಲವು ಜಿಲ್ಲೆಯಲ್ಲಿ ಬಂದ್‌ ಇಲ್ಲವೇ ಇಲ್ಲ. ಈ ನಡುವೆ ಪ್ರತಿಭಟನೆ, ಬಂದ್‌ನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುವ ರೌಡಿಶೀಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Vijaya Karnataka Web Shivajinagar


ನೂರಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಮಾಹಿತಿ ನೀಡಿದ್ದಾರೆ. ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ಎಲ್ಲಾ ರೌಡಿ ಶೀಟರ್‌ಗಳನ್ನು ಪರೇಡ್‌ಗೆ ಕರೆಸಿ ವಾರ್ನಿಂಗ್ ನೀಡಲಾಗಿತ್ತು, ಇದಾಗ್ಯೂ ಹಲವರು ಪೊಲೀಸ್‌ ಠಾಣೆಗೆ ಬಂದಿರಲಿಲ್ಲ. ಇನ್ನು ಕೆಲವರು ಹಿಂಸೆ ಕೃತ್ಯದಲ್ಲಿ ಭಾಗಿಯಾಗುವ ಸಾಧ್ಯತೆಯನ್ನು ಗುಪ್ತಚರ ಇಲಾಖೆ ನೀಡಿದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ.


ಎಂದಿನಂತೆ ಶಿವಾಜಿನಗರ!
ಇನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಎಂದಿನಂತೆ ಜನಜೀವನ ಸಾಗುತ್ತಿದೆ. ಅಂಗಡಿ-ಮುಂಗಟ್ಟುಗಳು ತೆರೆದಿದೆ. ಆಟೋಗಳು ಓಡಾಡುತ್ತಿದೆ. ಆದರೆ ಜನರು ಮಾತ್ರ ಬೀದಿಗಿಳಿಯಲು ಹಿಂದೇಟು ಹಾಕಿದಂತೆ ಕಾಣುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ