ಆ್ಯಪ್ನಗರ

ಪರಿಷತ್‌ನಲ್ಲಿ ಹೊರಟ್ಟಿ ಬೆಂಬಲಿಸಲು ಬಿಜೆಪಿ ನಿರ್ಧಾರ; ಮೇಲ್ಮನೆಯಲ್ಲಿ ದಳ-ಕಮಲ ಮೈತ್ರಿಗೆ ಕ್ಯಾಬಿನೆಟ್‌ ಅಸ್ತು

ಕಾಂಗ್ರೆಸ್‌ನ ಪ್ರತಾಪ್‌ ಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ ಸಭಾಪತಿ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್‌ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಅವರನ್ನು ಬೆಂಬಲಿಸಲು ಬಿಜೆಪಿ ತೀರ್ಮಾನಿಸಿದೆ. ಈ ಬಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಮೇಲ್ಮನೆಯ ದಳ-ಕಮಲ ಮೈತ್ರಿಗೆ ಅಸ್ತು ಎನ್ನಲಾಗಿದೆ.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 5 Feb 2021, 11:04 am

ಹೈಲೈಟ್ಸ್‌:


  • ಪರಿಷತ್‌ನಲ್ಲಿ ಬಸವರಾಜ್‌ ಹೊರಟ್ಟಿ ಅವರನ್ನು ಬೆಂಬಲಿಸಲು ನಿರ್ಧರಿಸಿದ ಬಿಜೆಪಿ
  • ಪರಿಷತ್‌ ಸಭಾಪತಿ ಸ್ಥಾನಕ್ಕೆ ಸ್ಪರ್ಧಿಸಲಿರುವ ಜೆಡಿಎಸ್‌ನ ಬಸವರಾಜ್‌ ಹೊರಟ್ಟಿ
  • ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ ಬಿಎಸ್‌ ಯಡಿಯೂರಪ್ಪ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Horatti BSY
ಬಸವರಾಜ್‌ ಹೊರಟ್ಟಿ, ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ)
ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಚುನಾವಣೆಯಲ್ಲಿ ಜೆಡಿಎಸ್‌ನ ಬಸವರಾಜ್‌ ಹೊರಟ್ಟಿ ಅವರನ್ನು ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ. ಈ ಬಗ್ಗೆ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಪರಿಷತ್ ಸಭಾಪತಿ ಚುನಾವಣೆ ಹಾಗೂ ವಿಧಾನಸಭೆ ಅಧಿವೇಶನದ ಕೊನೆಯ ದಿನದ ಹಿನ್ನೆಲೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಪರಿಷತ್‌ ಅಧಿವೇಶನವನ್ನು ಮೂರು ದಿನಗಳ ಕಾಲ ಮುಂದುವರೆಸಲು ನಿರ್ಧರಿಸಲಾಗಿದೆ. ಮಂಗಳವಾರ ಪರಿಷತ್‌ ಸಭಾಪತಿ ಚುನಾವಣೆ ನಡೆಯಲಿದ್ದು, ಸೋಮವಾರ ನಾಮಪತ್ರ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ಪರಿಷತ್‌ ಸಭಾಪತಿ ಸ್ಥಾನಕ್ಕೆ ಗುರುವಾರ ಕಾಂಗ್ರೆಸ್‌ನ ಪ್ರತಾಪ್‌ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಜೆಡಿಎಸ್‌ನಿಂದ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಸ್ಪರ್ಧಿಸಲಿದ್ದು, ಅವರಿಗೆ ಬೆಂಬಲ ನೀಡಲು ಬಿಜೆಪಿ ತೀರ್ಮಾನ ಮಾಡಿದೆ. ಬಸವರಾಜ್‌ ಹೊರಟ್ಟಿ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.
ರಾಜ್ಯದ ಜನತೆಯ ಕ್ಷಮೆ ಕೋರಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರತಾಪಚಂದ್ರ ಶೆಟ್ಟಿಅಷ್ಟೇ ಅಲ್ಲದೇ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಶುಕ್ರವಾರ ಉತ್ತರ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳ ವಿರೋಧಕ್ಕೆ ಸಜ್ಜಾಗಿರುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ. ಎಲ್ಲ ರೀತಿಯ ಸಿದ್ಧತೆಗಳ ಜೊತೆಗೆ ಸದನದಲ್ಲಿ ಕೊನೆ ದಿನ ಕಡ್ಡಾಯವಾಗಿ ಪೂರ್ತಿ ದಿನ ಹಾಜರಾಗುವಂತೆ ಸಂಪುಟ ಸಭೆಯಲ್ಲಿ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ನಿರ್ಧಾರಕ್ಯಾಬಿನೆಟ್ ಸಭೆಯಲ್ಲಿ ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಕೆ.ಎಸ್.ಈಶ್ವರಪ್ಪ ಸೇರಿ ಹಲವು ಸಚಿವರು ಭಾಗಿಯಾಗಿದ್ದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ