ಆ್ಯಪ್ನಗರ

ಕರ್ನಾಟಕದಲ್ಲಿ ಬಿಜೆಪಿ ಜಯಭೇರಿಗೆ ಹರ್ಷ ವ್ಯಕ್ತಪಡಿಸಿದ ಸುಬ್ರಮಣಿಯನ್‌ ಸ್ವಾಮಿ

ಬಿಜೆಪಿ ಹಿರಿಯ ನಾಯಕರಾದ ಸುಬ್ರಮಣಿಯನ್ ಸ್ವಾಮಿ ಅವರು ರಾಜ್ಯದ ಉಪಚುನಾವಣೆಯಲ್ಲಿ ಯಡಿಯೂರಪ್ಪ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರಕಾರವನ್ನು ಸುಭದ್ರಗೊಳಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

Vijaya Karnataka Web 9 Dec 2019, 6:25 pm
ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 15 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮದ ವಾತಾವರಣ ಏರ್ಪಟ್ಟಿದೆ. ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಈ ಸಾಧನೆಗೆ ರಾಜಕೀಯ ಧುರೀಣರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Vijaya Karnataka Web subramanian swamy


ಇದೀಗ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರಾದ ಸುಬ್ರಮಣಿಯನ್ ಸ್ವಾಮಿ ಅವರು ಕೂಡ ಯಡಿಯೂರಪ್ಪ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನಿರ್ಣಾಯಕ ಉಪಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರಕಾರವನ್ನು ಸುಭದ್ರಗೊಳಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪಕ್ಷದ ಸಹೋದ್ಯೋಗಿ ಮತ್ತು ದೀರ್ಘಕಾಲದ ಸ್ನೇಹಿತ ಯಡಿಯೂರಪ್ಪ ಅವರು ಕರ್ನಾಟಕ ವಿಧಾನಸಭೆ ಉಪಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದಾರೆ. ಈ ಮೂಲಕ ನಿರ್ಣಾಯಕ ಪರಿಸ್ಥಿತಿಯಲ್ಲಿ ಕರ್ನಾಟಕದ ಮತದಾರರ ಬೆಂಬಲ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ನನ್ನಲ್ಲಿ ಸಂತೋಷ ತಂದಿದೆ ಎಂದು ಸುಬ್ರಮಣಯನ್‌ ಸ್ವಾಮಿ ಟ್ವಿಟರ್‌ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

ಸೋಲಿಗೆ ಕಂಗಾಲಾದ ಎಂಟಿಬಿ; ಬಚ್ಚೇಗೌಡರ ಪುತ್ರ ವ್ಯಾಮೋಹ ಕಾರಣ ಎಂದು ಬೇಸರ

ಸುಬ್ರಮಣಿಯನ್‌ ಸ್ವಾಮಿ ನೇರ -ನಿಷ್ಠಿರದ ರಾಜಕಾರಣಿಯಾಗಿದ್ದು, ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು. ಇತ್ತೀಚೆಗಷ್ಟೇ, ಪ್ರಧಾನಿ ನರೇಂದ್ರ ಮೋದಿ ನನ್ನ ಮಾತುಗಳನ್ನು ಕೇಳುತ್ತಿಲ್ಲ ಹಾಗಾಗಿ ನಾನು ಚೀನಾಗೆ ತೆರಳುವೆ ಎಂದು ಹೇಳುವ ಮೂಲಕ ಹಲವರ ಟೀಕೆಗೆ ಗುರಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ