ಆ್ಯಪ್ನಗರ

ಆರ್.‌ಆರ್ ನಗರ ಬೈಎಲೆಕ್ಷನ್: ಟಿಕೆಟ್‌ ನಿರ್ಧಾರ ಹೈಕಮಾಂಡ್‌ ಕೈಯಲ್ಲಿ, ಎಸ್‌.ಟಿ ಸೋಮಶೇಖರ್

ಆರ್.‌ಆರ್ ನಗರ ಬೈಎಲೆಕ್ಷನ್ ನಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಎಸ್‌.ಟಿ ಸೋಮಶೇಖರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 1 Oct 2020, 2:56 pm
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಯಾರನ್ನು ಕಣಕ್ಕಿಳಿಸಬೇಕು ಎಂಬ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು ಟಿಕೆಟ್‌ ವಿಚಾರವಾಗಿ ಬಿಜೆಪಿ ಕೋರ್ ಕಮಿ‌ಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದರು.
Vijaya Karnataka Web st shomashekar in vk


ಗುರುವಾರ ಸಂಜೆ ಐದು ಗಂಟೆಗೆ ಕೋರ್ ಕಮಿ‌ಟಿ ಸಭೆಯಲ್ಲಿ ಆಕಾಂಕ್ಷಿಗಳ ಕುರಿತಾಗಿ ಚರ್ಚೆ ನಡೆಯಲಿದೆ. ಬಿಜೆಪಿ ಪಕ್ಷದಲ್ಲಿ ಒಂದು ಚೌಕಟ್ಟು ಇದ್ದು, ಅದರಡಿಯಲ್ಲಿ ನಿರ್ಧಾರ ಆಗುವ ಮೊದಲು ಯಾರಿಗೆ ಟಿಕೆಟ್ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಕೋವಿಡ್‌: ದೇಶದಲ್ಲಿ ಎರಡನೇ ಸ್ಥಾನದಲ್ಲಿ ಕರ್ನಾಟಕ, ರಾಜ್ಯ ಸರ್ಕಾರ ಎಡವಿದ್ದೆಲ್ಲಿ?

ಆರ್.ಆರ್‌ ನಗರ ಉಪಚುನಾವಣೆ ವಿಚಾರವಾಗಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಕೊಡುವ ವರೆಗೆ ಯಾರು ಅಭ್ಯರ್ಥಿ ಎಂದು ಹೇಳಲು ಸಾಧ್ಯವಿಲ್ಲ. ಯಾರಿಗೆ ಟಿಕೆಟ್‌ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.

ಮುನಿರತ್ಮ ಕೂಡಾ ಟಿಕೆಟ್ ಗೆ ಮನವಿ ಮಾಡುತ್ತಿದ್ದಾರೆ. ಗೆಲ್ಲುವ ಅಭ್ಯರ್ಥಿ ಯಾರು ಎಂದು ನೋಡಿ ಅಂತಿಮ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದರು.

ನವೆಂಬರ್‌ 3 ರಂದು ಶಿರಾ ಹಾಗೂ ಆರ್‌.ಆರ್‌ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಎರಡು ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಗುರುವಾರ ಬಿಜೆಪಿ ಕಚೇರಿಯಲ್ಲಿ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ