ಆ್ಯಪ್ನಗರ

ಬಿಜೆಪಿ ನೂತನ ಅಧ್ಯಕ್ಷರಾಗಿ ಇಂದು ಕಟೀಲ್‌ ಅಧಿಕಾರ ಸ್ವೀಕಾರ

ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ದಕ್ಷಿಣ ಕನ್ನಡದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ...

Vijaya Karnataka 27 Aug 2019, 5:00 am
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ದಕ್ಷಿಣ ಕನ್ನಡದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಟೀಲ್‌ಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.
Vijaya Karnataka Web BNG-2608-2-2-KATEEL


ನಳಿನ್‌ ಕುಮಾರ್‌ ಕಟೀಲ್‌ ಅವರು ಮಂಗಳವಾರ ಬೆಳಿಗ್ಗೆ ದಿಲ್ಲಿಯಿಂದ ಆಗಮಿಸಲಿದ್ದು ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಗುವುದು, ಅಲ್ಲಿಂದ ನೇರವಾಗಿ ಮಲ್ಲೇಶ್ವರಂನಲ್ಲಿರುವ ಕಾಡುಮಲ್ಲೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವರು. ಬಳಿಕ ಬಿಜೆಪಿ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಮಧ್ಯಾಹ್ನ ರಾಜ್ಯ ಬಿಜೆಪಿಯ ವಿಶೇಷ ಸಭೆಯೂ ನಡೆಯಲಿದೆ. ಭಾನುವಾರವೇ ಪದಗ್ರಹಣ ಸಮಾರಂಭ ನಿಗದಿಯಾಗಿತ್ತಾದರೂ ಕೇಂದ್ರದ ಮಾಜಿ ಸಚಿವ ಅರುಣ್‌ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ರದ್ದಾಗಿತ್ತು.

ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ''ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿಯು ವಿಧಾನಸಭೆ, ಲೋಕಸಭೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭರ್ಜರಿ ಜಯಗಳಿಸಿದೆ. ಎಲ್ಲಾ ಹಂತದಲ್ಲೂ ಪಕ್ಷವನ್ನು ಸದೃಢವಾಗಿ ಬೆಳೆಸಿದ್ದಾರೆ. ಮುಂದಿನ ಅಧ್ಯಕ್ಷರಾಗಲಿರುವ ಕಟೀಲ್‌ ಅವರು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಉತ್ತಮ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿ ಈ ಹಂತಕ್ಕೆ ಬೆಳೆದಿದ್ದಾರೆ. ಇವರ ನೇಮಕ ಪಕ್ಷದ ಕಾರ್ಯಕರ್ತರ ವಲಯದಲ್ಲಿ ಸಂತೋಷ ತಂದಿದ್ದು ಎಲ್ಲರೂ ಸ್ವಾಗತಿಸಿದ್ದಾರೆ. ಮಂಗಳವಾರ ಇಡೀ ದಿನ ನೂತನ ಅಧ್ಯಕ್ಷರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು,'' ಎಂದರು. ಮೇಲ್ಮನೆ ಸದಸ್ಯ ಲೆಹರ್‌ಸಿಂಗ್‌, ಪಕ್ಷದ ವಕ್ತಾರ ಅಶ್ವತ್ಥನಾರಾಯಣ ಹಾಗೂ ಸಹ ವಕ್ತಾರ ಎಸ್‌.ಪ್ರಕಾಶ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ