ಆ್ಯಪ್ನಗರ

ಸಿಎಂ ಬಿಎಸ್‌ವೈ ಸರ್ಕಾರದ ಕಾರ್ಯವೈಖರಿಗೆ ಅರುಣ್ ಸಿಂಗ್ ಶಹಬ್ಬಾಸ್‌ಗಿರಿ..

'ಮಾಧ್ಯಮಗಳಿಗೆ ಅನಗತ್ಯವಾಗಿ ವೈಯಕ್ತಿಕ ಹೇಳಿಕೆಗಳನ್ನು ನೀಡಬೇಡಿ. ನಿಮ್ಮ ಕ್ಷೇತ್ರದಲ್ಲಿ ಜನರಿಗಾಗಿ ಕಾರ್ಯನಿರ್ವಹಿಸಿ ಹಾಗೂ ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಮಾರ್ಗದರ್ಶನ ನೀಡುವ ಸಲುವಾಗಿ ಬಂದಿದ್ದೇನೆ' - ಅರುಣ್ ಸಿಂಗ್

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 16 Jun 2021, 6:12 pm

ಹೈಲೈಟ್ಸ್‌:

  • ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡ್ತಿದೆ
  • ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ
  • ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟನೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web arun singh
ಸಿಎಂ ಬಿಎಸ್‌ವೈ ಸರ್ಕಾರದ ಕಾರ್ಯವೈಖರಿಗೆ ಅರುಣ್ ಸಿಂಗ್ ಶಹಬ್ಬಾಸ್‌ಗಿರಿ..
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರದ ಕುಮಾರ ಕೃಪ ಅತಿಥಿ ಗೃಹದಿಂದ ಬಿಜೆಪಿ ಕಚೇರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದ ಎಲ್ಲಾ ನಾಯಕರು ಒಂದಾಗಿದ್ದಾರೆ. ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದರು.

ಪ್ರತಿಯೊಬ್ಬ ನಾಯಕರ ಜೊತೆಗೆ ಸಮಾಲೋಚಿಸುವ ಉದ್ದೇಶ ಇದೆ. ಮಾಧ್ಯಮಗಳಿಗೆ ಅನಗತ್ಯವಾಗಿ ವೈಯಕ್ತಿಕ ಹೇಳಿಕೆಗಳನ್ನು ನೀಡಬೇಡಿ. ನಿಮ್ಮ ಕ್ಷೇತ್ರದಲ್ಲಿ ಜನರಿಗಾಗಿ ಕಾರ್ಯನಿರ್ವಹಿಸಿ ಹಾಗೂ ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಮಾರ್ಗದರ್ಶನ ನೀಡುವ ಸಲುವಾಗಿ ಬಂದಿದ್ದೇನೆ. ನಾಯಕತ್ವ ಬದಲಾವಣೆ ಅಥವಾ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಚರ್ಚೆ ನಡೆಸಲು ಬಂದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಮೂರು ದಿನದ ಕಾರ್ಯಕ್ರಮ ನಿಮಿತ್ತ ಬಂದಿದ್ದೇನೆ. ಪಕ್ಷ ಸಂಘಟನೆ ಕುರಿತು ಚರ್ಚಿಸುತ್ತೇನೆ. ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ನಿಲುವು, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸುತ್ತೇವೆ. ಸಿಎಂ, ಮಂತ್ರಿಗಳು ಜನರ ಸೇವೆಗೆ ತೊಡಗಿಸಿಕೊಳ್ಳಬೇಕು. ಇದರ ಬಗ್ಗೆ ನಾನು ಅವರಿಗೆ ಸೂಚಿಸುತ್ತೇನೆ ಎಂದು ಅರುಣ್ ಸಿಂಗ್ ಹೇಳಿದರು.

ಕೋವಿಡ್‌ನಿಂದ ಮೃತಪಟ್ಟವರಿಗೆ 1 ಲಕ್ಷ ಘೋಷಿಸಲಾಗಿದೆ. ದೇಶದ ಹಲವು ರಾಜ್ಯಗಳಲ್ಲೂ ಘೋಷಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಆರೋಪ ಮಾಡ್ತಿದೆ. ನಾಯಕತ್ವ ಬದಲಾವಣೆ ಬಗ್ಗೆ ಪುಕಾರು ನಡೆದಿವೆ. ಆದ್ರೆ, ನಮ್ಮ‌ ಪಕ್ಷದಲ್ಲಿ ಎಲ್ಲವೂ ಸರಿಯಿದೆ ಎಂದು ಅರುಣ್ ಸಿಂಗ್ ಸಮರ್ಥಿಸಿಕೊಂಡರು.

'ಮೂರು ಪಕ್ಷಗಳ ಸರ್ಕಾರ' ಎಂದಿದ್ದ ಸಿ.ಪಿ ಯೋಗೀಶ್ವರ್‌ ವಿರುದ್ಧ ಅರುಣ್ ಸಿಂಗ್‌ಗೆ ದೂರು ನೀಡುತ್ತಾರಾ ಬಿಎಸ್‌ವೈ ಆಪ್ತರು?
ಪಕ್ಷದಲ್ಲಿ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ. ಕೆಲವು ಸಣ್ಣಪುಟ್ಟ ಸಮಸ್ಯೆ ನಾನು ಬಗೆಹರಿಸುತ್ತೇನೆ. ಅದಕ್ಕೆ ವೈಯಕ್ತಿಕವಾಗಿ ಮಾತುಕತೆ ನಡೆಸ್ತೇನೆ. ನಾನು ನನಗಿರುವ ಮಾಹಿತಿಯನ್ನು ಹೇಳಿದ್ದೇನೆ. ಯಡಿಯೂರಪ್ಪ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಂಗ್ ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಅರುಣ್ ಸಿಂಗ್ ಭೇಟಿ ಸಂಚಲನ..! ಸಿಎಂ ಬಿಎಸ್‌ವೈ ನಿವಾಸದಲ್ಲಿ ಆಪ್ತರ ಪರೇಡ್..!
ಪಕ್ಷ ಸಂಘಟನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಯಾವ ರೀತಿ ನಡೆಸಿಕೊಂಡು ಹೋಗಬಹುದು. ಸಂಘಟನೆ ವಿಚಾರವಾಗಿ ಕೈಗೊಳ್ಳಬಹುದಾದ ನಿಲುವುಗಳ ಚರ್ಚೆ ಮಾಡುತ್ತೇವೆ. ಪಕ್ಷದ ಕಾರ್ಯಕರ್ತರು ತಮ್ಮ ಜೀವವನ್ನು ಪಣಕ್ಕಿಟ್ಟು 11 ಸಾಮಾಜಿಕ ಕಾರ್ಯವನ್ನು ನಿರ್ವಹಿಸಿದ್ದಾರೆ. ಇದರ ಸಮೀಕ್ಷೆ ಮಾಡುವುದು ಹಾಗೂ ಜನರಿಗೆ ಇನ್ನಷ್ಟು ಸಹಾಯ ಮಾಡುವುದು ನಮ್ಮ ಉದ್ದೇಶವಾಗಿದೆ. ಮುಂಬರುವ ದಿನಗಳಲ್ಲಿ ಗಿಡ ನೆಡುವ ಕಾರ್ಯ, ಪರಿಸರ ಸಂರಕ್ಷಣೆ, ಒಂದು ಸಾರಿ ಬಳಕೆಯಾಗುವ ಪ್ಲಾಸ್ಟಿಕ್ ನಿಷೇಧ, ಅಂತರಾಷ್ಟ್ರೀಯ ಯೋಗ ದಿನದ ಸಿದ್ಧತೆ, ಇದಲ್ಲದೆ ಇನ್ನೂ ಸಾಕಷ್ಟು ಕಾರ್ಯಕ್ರಮಗಳ ಕಾರ್ಯ ಯೋಜನೆ ರೂಪಿಸುವ ಕುರಿತು ಚರ್ಚಿಸಲಿದ್ದೇನೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ