ಆ್ಯಪ್ನಗರ

ಗ್ರಾಮ ಪಂಚಾಯತ್ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ, ನಳಿನ್ ಕುಮಾರ್ ಕಟೀಲ್ ವಿಶ್ವಾಸ

ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಪಕ್ಷ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು ಈ ಕುರಿತಾಗಿ ಏನಂದರು ಎಂಬ ವಿವರ ಇಲ್ಲಿದೆ.

Vijaya Karnataka Web 30 Nov 2020, 10:54 am
ಬೆಂಗಳೂರು: ಗ್ರಾಮಪಂಚಾಯತ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಪಕ್ಷ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಗ್ರಾಮಪಂಚಾಯತ್ ಚುನಾವಣಾ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆಯನ್ನು ಎದುರಿಸಲು ಪಕ್ಷದ ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ತಿಳಿಸಿದರು.
Vijaya Karnataka Web Nalin Kumar Kateel


ಇನ್ನು ಸಂಪುಟ ವಿಸ್ತರಣೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತಾಗಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರು ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಗ್ರಾಮಪಂಚಾಯತ್ ಚುನಾವಣೆ ಘೋಷಣೆ ಸಾಧ್ಯತೆ, ಕೆಲವೇ ಕ್ಷಣಗಳಲ್ಲಿ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗ ಎಂಬ ಗೊಂದಲ ಇಲ್ಲ. ಬಿ ಫಾರಂ ಪಡೆದು ಪಕ್ಷದ ಚಿಹ್ನೆಯಲ್ಲಿ ಸ್ಪರ್ಧೆ ನಡೆಸಿದ ಎಲ್ಲರು ಬಿಜೆಪಿಗರೇ. ಬೇರೆ ಬೇರೆ ಕಾರಣಗಳಿಂದ ವಲಸಿಗರು ಸಭೆ ನಡೆಸಿದ್ದಾರೆ ಹೊರತಾಗಿ ಸಂಪುಟ ವಿಸ್ತರಣೆ ವಿಚಾರವಾಗಿ ಅಲ್ಲ. ಅಭಿವೃದ್ದಿ ವಿಚಾರವಾಗಿ ಚರ್ಚೆ ನಡೆಸಲು ಸಭೆ ನಡೆಸಿದ್ದಾರೆ ಎಂದು ವಿವಾದಕ್ಕೆ ತೇಪೆ ಹಾಕುವ ಪ್ರಯತ್ನ ಮಾಡಿದರು.

ಇದೇ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ರಾಜಕೀಯ ಕಾರ್ಯದರ್ಶಿ ಎನ್‌ಆರ್ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ಡಿಕೆಶಿ ಅವರಲ್ಲಿ ಈ ಕುರಿತಾದ ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ, ಅದರ ಹೊರತಾಗಿ ಸುಳ್ಳು ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ