ಆ್ಯಪ್ನಗರ

Dk Shivakumar: ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ನಡಿಗೆಯ ನೈಜ ಉದ್ದೇಶ ಏನು? ಬಿಜೆಪಿ ಪ್ರಶ್ನೆ

Dk Shivakumar ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ನಡಿಗೆಯ ನೈಜ ಉದ್ದೇಶ ಏನು? ಬಿಜೆಪಿ ಪ್ರಶ್ನೆ ಮಾಡಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು ನೀಡಿದೆ.

Vijaya Karnataka Web 17 Aug 2022, 3:30 pm

ಹೈಲೈಟ್ಸ್‌:

  • ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ನಡಿಗೆಯ ನೈಜ್ಯ ಉದ್ದೇಶ ಏನು?
  • ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ?
  • ಟ್ವೀಟ್‌ ಮೂಲಕ ಡಿಕೆ ಶಿವಕುಮಾರ್‌ಗೆ ಕಾಂಗ್ರೆಸ್ ಪ್ರಶ್ನೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web DK Shivakumara in padayatre
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮದ ಅಸಲಿ ಉದ್ದೇಶ ಏನು ಎಂದು ಬಿಜೆಪಿ ಪ್ರಶ್ನಿಸಿದೆ.


ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ,ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ಸ್ವಾತಂತ್ರ್ಯದ ನಡಿಗೆಯ ಉದ್ದೇಶ ಏನಾಗಿತ್ತು? ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್ ಹಿರಿಯ ನಾಯಕರು ಡಿಕೆಶಿ ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ? ಎಂದು ಟಾಂಗ್ ನೀಡಿದೆ.

M B Patil: ಇದು ದಿಕ್ಕು ದೆಸೆ ಇಲ್ಲದ ಸರ್ಕಾರವಾಗಿದೆ: ಬಿಜೆಪಿ ವಿರುದ್ಧ ಎಂಬಿ ಪಾಟೀಲ್ ಕಿಡಿ
ಪ್ರತಿ ತಿಂಗಳು ಒಂದು ಕಾರ್ಯಕ್ರಮದ ಮೂಲಕ ಸದಾ ಚಾಲ್ತಿಯಲ್ಲಿರಲು ಕಾಂಗ್ರೆಸ್ ಲೆಕ್ಕ ಹಾಕಿದೆ. ಆದರೆ ಒಂದೇ ತಿಂಗಳಲ್ಲಿ ಮೂವರು ನಾಯಕರು ಒಬ್ಬರ ಮೇಲೊಬ್ಬರು ಪೈಪೋಟಿಗೆ ಬಿದ್ದವರಂತೆ ಉತ್ಸವ, ನಡಿಗೆ ಹಾಗೂ ಪ್ರಚಾರ ಯಾತ್ರೆ ಆರಂಭಿಸಿದ್ದಾರೆ ಎಂದು ಕಾಲೆಳೆದಿದೆ.

ಮೊದಲು ಮನೆಯ ಜಗಳ ಬಗೆಹರಿಸಿಕೊಳ್ಳಿ, ನಂತರ ಜಗತ್ತಿನ ಸಮಸ್ಯೆ ಬಗ್ಗೆ ಮಾತನಾಡಿ. ಕಾಂಗ್ರೆಸ್ ಒಳಮನೆಯಲ್ಲಿ ನೂರಾರು ರಂದ್ರವಾಗಿದೆ ಎಂದು ತಿರುಗೇಟು ನೀಡಿದೆ.

ಹೈಕಮಾಂಡ್ ವಿರುದ್ಧ G23 ಮುಖಂಡರು ಸದಾ ದಂಗೆ ಏಳುತ್ತಿದ್ದರೂ ಎದುರಿಸಲಾಗದ ಕಾಂಗ್ರೆಸ್ ಹಡಗು ರಾಷ್ಟ್ರಮಟ್ಟದಲ್ಲೇ ಮುಳುಗಿ ಹೋಗುತ್ತಿದೆ ಎನ್ನುವ ಮೂಲಕ ಕಾಂಗ್ರೆಸ್‌ ಕಲಹಕ್ಕೆ ಈ ರೀತಿಯಾಗಿ ಎತ್ತಿತೋರಿಸಿದೆ.

ರಾಜ್ಯ ಬಿಜೆಪಿಯಲ್ಲಿ ಬಹಿರಂಗೊಂಡಿರುವ ಭಿನ್ನಾಭಿಪ್ರಾಯಗಳ ಕುರಿತಾಗಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿತ್ತು. ಸಚಿವ ಜೆ.ಸಿ ಮಾಧುಸ್ವಾಮಿ ಅವರು ರಾಜ್ಯದಲ್ಲಿ ಸರ್ಕಾರ ನಡೆಸುತ್ತಿಲ್ಲ, ಬದಲಾಗಿ ಮ್ಯಾನೇಜ್ ಮಾಡಲಾಗುತ್ತಿದೆ ಎಂದು ಹೇಳಿದ್ದರು.

ಮಾಧುಸ್ವಾಮಿ ಹೇಳಿಕೆಯ ಬೆನ್ನಲ್ಲೇ ಸಚಿವರಾದ ಎಸ್‌ಟಿ ಸೋಮಶೇಖರ್‌, ಮುನಿರತ್ನ ಅವರು ಮಾಧುಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರಲ್ಲೂ ಮುನಿರತ್ನ ಅವರು ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ಟ್ವೀಟ್ ಮೂಲಕ ಇದೀಗ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು ನೀಡಿದೆ. ತಮ್ಮ ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ಗೆ ಅವರ ಪಕ್ಷದಲ್ಲಿರುವ ಭಿನ್ನಾಭಿಪ್ರಾಯವನ್ನು ಎತ್ತಿತೋರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ