ಆ್ಯಪ್ನಗರ

ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ! ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ! ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತಾಗಿ ಸರಣಿ ಟ್ವೀಟ್ ಗಳನ್ನು ಬಿಜೆಪಿ ಮಾಡಿದ್ದು, ಅದರ ವಿವರ ಇಲ್ಲಿದೆ.

Vijaya Karnataka Web 25 Jun 2022, 6:25 pm

ಹೈಲೈಟ್ಸ್‌:

  • ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ
  • ತುರ್ತುಪರಿಸ್ಥಿತಿ ವಿರೋಧಿ ಹೋರಾಟದಲ್ಲಾದರೂ ಭಾಗಿಯಾಗಿದ್ದಿರಾ?
  • ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್‌ನಲ್ಲಿ ಬಿಜೆಪಿ ಕಿಡಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bjp tweet on siddaramaiah
ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ! ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು: ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ! ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಜಾವಾದಿ ಸಿದ್ದರಾಮಯ್ಯ ಅವರೇ, ನೀವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದೀರಾ? ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದೇ ಪರಿಗಣಿಸಲ್ಪಟ್ಟ ತುರ್ತುಪರಿಸ್ಥಿತಿ ವಿರೋಧಿ ಹೋರಾಟದಲ್ಲಾದರೂ ಭಾಗಿಯಾಗಿದ್ದಿರಾ? ಇಲ್ಲ, ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದೆ.


ಪ್ರತ್ಯೇಕ ರಾಜ್ಯದ ವರಸೆ: ಉಮೇಶ್ ಕತ್ತಿಯನ್ನು ಸಂಪುಟದಿಂದ ಕಿತ್ತು ಹಾಕಬೇಕು! ಸಿದ್ದರಾಮಯ್ಯ ಆಗ್ರಹ

ನಕಲಿ ಗಾಂಧಿ ಕುಟುಂಬದ ವಿರುದ್ಧದ ಧ್ವನಿ ಹತ್ತಿಕ್ಕಲು 21 ತಿಂಗಳ ತುರ್ತು ಪರಿಸ್ಥಿತಿ, ಲಕ್ಷಕ್ಕೂ ಅಧಿಕ ಜನರ ಬಂಧನ, ಜೈಲುವಾಸ, 22 ಕ್ಕೂ ಅಧಿಕ ಸಂಗ್ರಾಮಿಗಳ ಕಸ್ಟಡಿ ಸಾವು. ಕರಾಳ ಇತಿಹಾಸಕ್ಕೆ ಮುನ್ನುಡಿ ಬರೆದ ಕಾಂಗ್ರೆಸ್‌ ಪಕ್ಷಕ್ಕ ಧಿಕ್ಕಾರವಿರಲಿ ಎಂದು ಟ್ವೀಟ್ ಮೂಲಕ ಟೀಕಿಸಿದೆ.

ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಸಿದ್ದರಾಮಯ್ಯ, ಡಿಕೆಶಿ, ಮಹಾದೇವಪ್ಪ ಮೊದಲಾದವರಿಗೆ ಸಂವಿಧಾನದ ಆಶಯಗಳಿಗೆ ಧಕ್ಕೆ ತಂದ ಮಹಾನ್ ಕುಟುಂಬ ಯಾವುದು ಎಂಬುದೇ ಗೊತ್ತಿಲ್ಲ.ಸತ್ಯವನ್ನು ಗ್ರಹಿಸದ ನಿಮ್ಮ ಏಕಮುಖ ರಸ್ತೆಯ ಪ್ರಯಾಣದ ಬಗ್ಗೆ ವಿಷಾದ ಮಾತ್ರ ವ್ಯಕ್ತಪಡಿಸಲು ಸಾಧ್ಯ ಎಂದಿದೆ.

ಸ್ವಾತಂತ್ರ್ಯಾನಂತರ ದೇಶದ ಪ್ರಜಾತಂತ್ರದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಕರಾಳ ಅಧ್ಯಾಯ. ತಮ್ಮ ಸ್ವಾರ್ಥಕ್ಕಾಗಿ ಈಡಿ ದೇಶವನ್ನೇ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕತ್ತಲೆಯಲಿಟ್ಟರು.ಕಾಂಗ್ರೆಸ್‌ ನಾಯಕರು ನಕಲಿ ಗಾಂಧಿ ಕುಟುಂಬದ ಪಾದಪೂಜೆ ಮಾಡುವ ಮುನ್ನ ಇತಿಹಾಸದ ಪುಟಗಳನ್ನು ತಿರುವಿಹಾಕಲಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ