ಆ್ಯಪ್ನಗರ

ಬಿಎಸ್‌ವೈ ವಿರುದ್ಧ ಬಹಿರಂಗ ಹೇಳಿಕೆ, ಯತ್ನಾಳ್ ವಿರುದ್ಧ ಆಗುತ್ತಾ ಶಿಸ್ತು ಕ್ರಮ?

ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದಿಂದ ಶಿಸ್ತು ಕ್ರಮ ಆಗಬೇಕು ಎಂಬ ಒತ್ತಾಯ ಬಿಎಸ್‌ವೈ ಆಪ್ತರಿಂದ ಕೇಳಿಬರುತ್ತಿದೆ.

Vijaya Karnataka Web 20 Oct 2020, 2:40 pm
ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬ ಚರ್ಚೆ ಬಿಎಸ್‌ವೈ ಆಪ್ತ ಬಳಗದಲ್ಲಿ ನಡೆಯುತ್ತಿದೆ. ಸಚಿವ ಸ್ಥಾನ ಕೈತಪ್ಪಿದ ಕಾರಣದಿಂದಾಗಿ ಅಸಮಾಧಾನಗೊಂಡಿರುವ ಯತ್ನಾಳ್ ಪದೇ ಪದೇ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಯತ್ನಾಳ್ ನಡೆ ಬಿಜೆಪಿಗೆ ಮುಜುಗರ ಉಂಟುಮಾಡುತ್ತಿದೆ.
Vijaya Karnataka Web basana gowda patil yatnal


ಸೋಮವಾರ ರಾತ್ರಿ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಶಾಸಕ ಯತ್ನಾಳ್ ಬಿಎಸ್‌ ಯಡಿಯೂರಪ್ಪ ಹೆಚ್ಚು ಅವಧಿ ಸಿಎಂ ಆಗಿ ಉಳಿಯುದಿಲ್ಲ ಎಂದಿದ್ದರು. ಅಲ್ಲದೆ ಹೈಕಮಾಂಡ್‌ ಕೂಡಾ ಮುನಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದರು. ಯತ್ನಾಳ್ ಹೇಳಿಕೆ ಕಮಲ ಪಾಳಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

'ಬಿಎಸ್‌ವೈ ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ'; ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್..!

ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿಕೆಗೆ ಬಿಎಸ್‌ವೈ ಆಪ್ತ ಶಾಸಕ ಹಾಗೂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು ರಾಜ್ಯದಲ್ಲಿ ಯಡಿಯೂರಪ್ಪ ಆಲದ ಮರದ ಇದ್ದಂತೆ. ಆಲದ ಮರದ ಕೆಳಗೆ ಇದ್ದು ನಾವು ರಾಜಕಾರಣ ಮಾಡಬೇಕು. ಯಡಿಯೂರಪ್ಪನವರನ್ನು ಟೀಕೆ ಮಾಡಿದ ಮಾತ್ರಕ್ಕೆ ಬೇರೆಯವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಯತ್ನಾಲ್‌ಗೆ ತಿರುಗೇಟು ನೀಡಿದ್ದಾರೆ. ಅಲ್ಲದೆಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಉ.ಕ. ನೆರೆ ಹಾವಳಿ: ಬುಧವಾರ ಸಿಎಂ ಬಿಎಸ್‌ವೈ ವೈಮಾನಿಕ ಸಮೀಕ್ಷೆ, ಆಲಮಟ್ಟಿಯಲ್ಲಿ ಮೀಟಿಂಗ್

ಇನ್ನು ಸಚಿವ ಆರ್‌ ಅಶೋಕ್‌ ಕೂಡಾ ಯತ್ನಾಳ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ 3 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಸೀಟ್ ಖಾಲಿ ಇದ್ದರೆ ಟವೆಲ್ ಹಾಕಬಹುದು ಆದರೆ ಸೀಟ್ ಖಾಲಿ ಇಲ್ಲ ಎಂದಮೇಲೆ ಟವೆಲ್ ಎಲ್ಲಿ ಹಾಕುತ್ತೀರ? ಎಂದು ಪ್ರಶ್ನಿಸಿದ್ದಾರೆ.

ಯತ್ನಾಳ್ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಇಂತಹ ಹೇಳಿಕೆ ನೀಡುವುದು ಇದೇ ಮೊದಲಲ್ಲ. ಬಿಎಸ್‌ವೈ ಆಪ್ತ ಬಳಗದಲ್ಲಿದ್ದ ಅವರು ಸಚಿವ ಸ್ಥಾನ ವಿಚಾರವಾಗಿ ಅಸಮಾಧಾನಗೊಂಡು ಬಹಿರಂಗವಾಗಿಯೇ ಹೇಳಿಕೆಗನ್ನು ನೀಡುತ್ತಿದ್ದಾರೆ. ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಸದಸ್ಯ ಅಯನೂರ್‌ ಮಂಜುನಾಥ್ ಇತ್ತೀಚೆಗೆ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದರು. ಯತ್ನಾಳ್ ಹೇಳಿಕೆಯನ್ನು ಕ್ಷಮಿಸಬಾರದು, ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶೋಕಾಸ್ ನೋಟಿಸ್‌ ಜಾರಿಗೊಳಿಸಬೇಕು ಎಂದು ಅವರು ಆಗ್ರಹ ಮಾಡಿದ್ದರು.

ಒಟ್ಟಿನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನೀಡುತ್ತಿರುವ ಇಂತಹ ಹೇಳಿಕೆಗಳು ಪಕ್ಷಕ್ಕೆ ಹಾಗೂ ಬಿಎಸ್‌ ಯಡಿಯೂರಪ್ಪನವರಿಗೆ ಮುಜುಗರ ತಂದೊಡ್ಡುತ್ತಿದೆ. ಆದರೆ ಅವರ ವಿರುದ್ಧ ಕ್ರಮ ಆಗುತ್ತಾ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ