ಆ್ಯಪ್ನಗರ

ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್‌: ಹಬ್ಬದ ಶುಭಾಶಯ, ರಾಜಕೀಯ ವಿಚಾರ ವಿನಿಮಯ

ಬಿಎಲ್‌ ಸಂತೋಷ್‌ ಮತ್ತು ಅರುಣ್‌ ಕುಮಾರ್‌ ಅವರು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ತಿಳಿಸಿದರು. ಸುಮಾರು ಮುಕ್ಕಾಲು ಗಂಟೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.

Vijaya Karnataka Web 22 Aug 2020, 5:34 pm
ಬೆಂಗಳೂರು: ಗಣೇಶ ಹಬ್ಬದ ದಿನದಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನಿವಾಸಕ್ಕೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಭೇಟಿ ನೀಡಿ ಮಾತುಕತೆ ನಡೆಸಿದರು.
Vijaya Karnataka Web ಬಿಎಸ್‌ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ


ಮುಖ್ಯಮಂತ್ರಿ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ ಬಿಎಲ್‌ ಸಂತೋಷ್‌, ಉಪಾಹಾರ ಸೇವಿಸಿ ಹಬ್ಬದ ಶುಭಾಶಯ ಕೋರಿದರು.

ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್‌ ಜತೆಗೂಡಿ ಬಿಎಲ್‌ ಸಂತೋಷ್‌ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ನಂತರ ಉಭಯ ನಾಯಕರು ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದರು.


ಸಂತೋಷ್‌ ಮತ್ತು ಅರುಣ್‌ ಕುಮಾರ್‌ ಅವರು ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ತಿಳಿಸಿದರು. ಸುಮಾರು ಮುಕ್ಕಾಲು ಗಂಟೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.

ಹೊಸದಿಲ್ಲಿಯಿಂದ ಆಗಮಿಸಿದ್ದ ಬಿ.ಎಲ್. ಸಂತೋಷ್ ಈಗ ರಾಜ್ಯ ಸಚಿವರ ಮೌಲ್ಯಮಾಪನ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ಕರೆಸಿ ಚರ್ಚೆ ನಡೆಸಿದ್ದರು. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಗೃಹ ಸಚಿವರಿಂದ ಬಿಎಲ್‌ ಸಂತೋಷ್ ಮಾಹಿತಿ ಕಲೆ ಹಾಕಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ