ಆ್ಯಪ್ನಗರ

ಚಿತ್ರಕಲಾ ಪರಿಷತ್‌ ಬಿ ಎಲ್‌ ಶಂಕರ್‌ ಅಧ್ಯಕ್ಷ

ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ 2019-21ರ ಅವಧಿಗೆ ಅಧ್ಯಕ್ಷರಾಗಿ ಡಾ ಬಿಎಲ್‌ ಶಂಕರ್‌ ಸತತ ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ...

Vijaya Karnataka 11 Jun 2019, 5:00 am
ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ 2019-21ರ ಅವಧಿಗೆ ಅಧ್ಯಕ್ಷರಾಗಿ ಡಾ. ಬಿ.ಎಲ್‌. ಶಂಕರ್‌ ಸತತ ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Vijaya Karnataka Web BL


ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗಾಗಿ ಜೂ.16ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಹುದ್ದೆಗೆ ಶಂಕರ್‌ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪರಿಷತ್ತಿನ ಉಪಾಧ್ಯಕ್ಷ ಹರೀಶ ಜೆ. ಪದ್ಮನಾಭ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದರು.

''ಖಜಾಂಚಿಯಾಗಿ ಎಂ.ಎನ್‌. ಬೆಳ್ಳಿಯಪ್ಪ , ಪ್ರಭುದೇವ ಆರಾಧ್ಯ, ಅರುಣ್‌ಕುಮಾರ್‌ ರಾಜ್‌ ಅರಸ್‌, ಟಿ.ವಿ. ತಾರಕೇಶ್ವರಿ, ಸಿ.ಎಸ್‌. ರಮಾಶರ್ಮಾ, ಬಿ.ವೈ. ವಿನೋದಾ, ಕೆ. ವಿಠಲ್‌ ಭಂಡಾರಿ, ಜಿ.ಎನ್‌. ಸತ್ಯನಾರಾಯಣ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ,'' ಎಂದರು.

ಜೂ.16ರಂದು ಚುನಾವಣೆ

''ಚಿತ್ರಕಲಾ ಪರಿಷತ್‌ನ ಮೂವರು ಉಪಾಧ್ಯಕ್ಷರ ಹುದ್ದೆ, ಒಂದು ಪ್ರಧಾನ ಕಾರ್ಯದರ್ಶಿ ಹಾಗೂ ಎರಡು ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಜೂ.16ರಂದು ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಚುನಾವಣೆ ನಡೆಯಲಿದೆ. 200ಕ್ಕೂ ಹೆಚ್ಚು ಮಂದಿ ಸದಸ್ಯರು ಮತ ಚಲಾಯಿಸುವರು,'' ಎಂದು ಹರೀಶ್‌ ಪದ್ಮನಾಭ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ