ಆ್ಯಪ್ನಗರ

ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್‌ ಯಡಿಯೂರಪ್ಪ

ಕರ್ನಾಟಕ ಬಿಜೆಪಿ ಕಂಡ ಅಗ್ರಗಣ್ಯ ನಾಯಕ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಸಾಧನಾ ಸಮಾವೇಶದ ವೇದಿಕೆಯಿಂದ ಇಳಿದು ರಾಜಭವನಕ್ಕೆ ತೆರಳಿರುವ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

Vijaya Karnataka Web 26 Jul 2021, 3:04 pm
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಕರ್ನಾಟಕದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿದ್ದಾರೆ.
Vijaya Karnataka Web BS Yediyurappa


ತಮ್ಮ ಭಾಷಣದ ನಂತರ ಸಾಧನಾ ಸಮಾವೇಶದ ವೇದಿಕೆಯಿಂದ ಇಳಿದು ರಾಜಭವನಕ್ಕೆ ತೆರಳಿರುವ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರ ರಾಜೀನಾಮೆಯನ್ನು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಸಚಿವರಾದ ಬಿ.ಸಿ ಪಾಟೀಲ್, ಮಾಧುಸ್ವಾಮಿ, ಕೆ. ಸುಧಾಕರ್, ಲಕ್ಷ್ಮಣ ಸವದಿ ಸೇರಿದಂತೆ ಹಲವು ಸಚಿವರುಗಳು ಸಾಥ್ ನೀಡಿದ್ದಾರೆ.
ರಾಜೀನಾಮೆಗೂ ಮುನ್ನ ಮಾತಿನುದ್ದಕ್ಕೂ ಭಾವುಕರಾಗುತ್ತಲೇ ವಿದಾಯ ಭಾಷಣ ಮಾಡಿದ ಯಡಿಯೂರಪ್ಪ!
ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿ 2019ರ ಜುಲೈ 26ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಎಸ್‌ ಯಡಿಯೂರಪ್ಪ ಅವರು, ಎರಡು ವರ್ಷ ಪೂರ್ಣಗೊಳಿಸಿ ಅಧಿಕಾರ ಸ್ವೀಕರಿಸಿದ ದಿನವೇ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ್ದ ಬಿಎಸ್‌ವೈ, ಭಾಷಣದುದ್ದಕ್ಕೂ ತಮ್ಮ ರಾಜಕೀಯ ಜೀವನವನ್ನು ನೆನೆದು ಭಾವುಕರಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ