ಆ್ಯಪ್ನಗರ

'ಉತ್ತಮ ಬಜೆಟ್‌ ಮಂಡಿಸುವೆ' ಎಂದ ಸಿಎಂ, ನಿರ್ಮಲಾ ಸೀತಾರಾಮನ್‌ ಭೇಟಿಯಾದ ಬಿಎಸ್‌ವೈ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು, ರಾಜ್ಯದ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

Vijaya Karnataka 30 Jan 2020, 8:45 pm

ಹೊಸದಿಲ್ಲಿ: ಸಚಿವ ಸಂಪುಟ ಸಭೆ ವಿಸ್ತರಣೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚಿಸಲು ದಿಲ್ಲಿಗೆ ಆಗಮಿಸಿರುವ ಸಿಎಂ ಬಿಎಸ್‌ ಯಡಿಯೂರಪ್ಪ ಅವರು, "ಸರಕಾರಕ್ಕೆ ಹಣಕಾಸಿನ ತೊಂದರೆ ಇಲ್ಲ. ಉತ್ತಮ ಬಜೆಟ್‌ ಮಂಡಿಸುತ್ತೇನೆ," ಎಂದು ತಿಳಿಸಿದರು.
Vijaya Karnataka Web BS Yediyurappa Nirmala Sitharaman


ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರದ ಮುಖಂಡರಿಗೆ ಮನವಿ ಮಾಡಲಾಗುವುದು. ಜತೆಗೆ ರಾಜ್ಯ ಸರಕಾರವು ಸಂತ್ರಸ್ತರಿಗೆ ನೆರೆ ಪರಿಹಾರ ನೀಡುವುದನ್ನು ಸ್ಥಗಿತಗೊಳಿಸಿಲ್ಲ," ಎಂದು ಸ್ಪಷ್ಟ ಪಡಿಸಿದರು.

ದಾವೋಸ್‌ ಪ್ರವಾಸ ಉತ್ತಮವಾಗಿತ್ತು. ಈಗಾಗಲೇ ಉದ್ಯಮಿಗಳಿಂದ ಪತ್ರಗಳು ಬರುತ್ತಿವೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಸಾಕಷ್ಟು ಉದ್ಯಮಿಗಳು ಉತ್ಸುಕರಾಗಿದ್ದಾರೆ. ಉದ್ಯಮಿಗಳಿಗೆ ಬೇಕಾದ ಸಂಪನ್ಮೂಲಗಳ ಅನುಕೂಲಗಳನ್ನು ಮಾಡಿಕೊಡುತ್ತೇವೆ.
ಬಿಎಸ್‌ ಯಡಿಯೂರಪ್ಪ, ಸಿಎಂ

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಸಿಎಂ ಮನವಿ

ಇದೇ ವೇಳೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ ಅವರು, ರಾಜ್ಯದ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬರುವ ಬಾಕಿ ಜಿಎಸ್‌ಟಿ ಕುರಿತು ವಿತ್ತ ಸಚಿವರ ಜತೆ ಚರ್ಚೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ